ರಾತ್ರಿ ಗ್ರೀನ್ ಟೀ ಕುಡಿಯುತ್ತೀರಾ?: ಆರೋಗ್ಯದ ಮೇಲೆ ಅಡ್ಡಪರಿಣಾಮ ಖಚಿತ!
ದಿನದಲ್ಲಿ ಎಷ್ಟು ಬಾರಿ ಗ್ರೀನ್ ಟೀ ಕುಡಿದರೆ ಉತ್ತಮ
Team Udayavani, Sep 6, 2022, 5:45 PM IST
ಇತ್ತೀಚಿನ ದಿನಗಳಲ್ಲಿ ಗ್ರೀನ್ ಟೀ ಬಹಳ ಜನಪ್ರಿಯವಾಗಿದೆ. ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಗ್ರೀನ್ ಟೀ ಕುಡಿಯುತ್ತಾರೆ. ತೂಕ ಇಳಿಸುವುದರಿಂದ ಹಿಡಿದು ಒತ್ತಡದಲ್ಲಿದ್ದಾಗ ನಮ್ಮ ದೇಹದ ನರಗಳಿಗೆ ವಿಶ್ರಾಂತಿ ನೀಡುವವರೆಗೆ ಗ್ರೀನ್ ಟೀಯಿಂದ ಹಲವು ಉಪಯೋಗಗಳಿವೆ. ಇದೇ ಕಾರಣಕ್ಕೆ ತಜ್ಞರು ಗ್ರೀನ್ ಟೀಯನ್ನು ಸಹ ಶಿಫಾರಸು ಮಾಡುತ್ತಾರೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಗ್ರೀನ್ ಟೀ ಕುಡಿದರೆ ಇನ್ನು ಕೆಲವರು ಮಲಗುವ ಮುನ್ನ ಒಂದು ಕಪ್ ಗ್ರೀನ್ ಟೀ ಕುಡಿಯಲು ಬಯಸುತ್ತಾರೆ. ಆದರೆ ಮಲಗುವ ಮುನ್ನ ಪ್ರತಿದಿನ ಗ್ರೀನ್ ಟೀ ಕುಡಿಯುವುದು ಸುರಕ್ಷಿತವೇ? ನಿಮ್ಮ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.
ಗ್ರೀನ್ ಟೀ ಆಕ್ಸಿಡೀಕರಿಸದ ಎಲೆಗಳನ್ನು ಬಳಸಿ ತಯಾರಿಸಿದ ಕಡಿಮೆ ಸಂಸ್ಕರಿಸಿದ ಚಹಾಗಳಲ್ಲಿ ಇದು ಒಂದು. ಇದು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು, ನಮ್ಮನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅನೇಕ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಗ್ರೀನ್ ಟೀ ಕುಡಿಯುತ್ತಾರೆ. ಇನ್ನೂ ಕೆಲವರು ರಾತ್ರಿ ಮಲಗುವ ವೇಳೆ ಹವ್ಯಾಸವಾಗಿ ಕುಡಿಯುತ್ತಾರೆ. ಇದರಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳು ಬೀಳಬಹುದು.
ಏನಿದು ಗ್ರೀನ್ ಟೀ?
ಹಸಿರು ಚಹಾ ಅಥವಾ ಗ್ರೀನ್ ಟೀ ಎಲೆಗಳನ್ನು ಕ್ಯಾಮೆಲಿಯಾ ಸಿನೆನ್ಸಿಸ್ ಸಸ್ಯದಿಂದ ಹೊರತೆಗೆಯಲಾಗುತ್ತದೆ. ಒಂದು ಕಪ್ ಹಸಿರು ಚಹಾವು ನರಗಳನ್ನು ಸಡಿಲಗೊಳಿಸುವುದಲ್ಲದೆ, ಮೆದುಳಿನ ಕಾರ್ಯ ನಿರ್ವಹಣೆಯನ್ನು ಹೆಚ್ಚಿಸುತ್ತದೆ. ಹಾಗೇ, ಇದು ನಿಮ್ಮ ಜೀವಕೋಶದ ಹಾನಿಯನ್ನು ಕಡಿಮೆ ಮಾಡುತ್ತದೆ.
ಗ್ರೀನ್ ಟೀಯನ್ನು ಕುಡಿಯಲು ಸರಿಯಾದ ಸಮಯ ಯಾವುದು? ಹಸಿರು ಚಹಾವನ್ನು ಕುಡಿಯಲು ಸರಿಯಾದ ಸಮಯದ ಬಗ್ಗೆ ನಿಖರವಾಗಿ ಹೇಳಲಾಗದಿದ್ದರೂ ಕೆಫೀನ್ ಇರುವ ಈ ಗ್ರೀನ್ ಟೀಯನ್ನು ಮಲಗುವ ವೇಳೆಗೆ ಕುಡಿಯುವುದು ಒಳ್ಳೆಯದಲ್ಲ. ಕೆಫೀನ್ ವ್ಯಕ್ತಿಯ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಮತ್ತು ನಿದ್ರಾಹೀನತೆಯನ್ನು ಉಂಟು ಮಾಡಬಹುದು. ಏಕೆಂದರೆ ಇದು ಮೆದುಳಿನ ಜಾಗರೂಕತೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ, ವ್ಯಕ್ತಿಗಳು ಮಲಗುವ ಮುನ್ನ ಹಸಿರು ಚಹಾ ಕುಡಿಯುವುದನ್ನು ನಿಲ್ಲಿಸುವುದು ಉತ್ತಮ. ನೀವೇನಾದರೂ ರಾತ್ರಿ ಗ್ರೀನ್ ಟೀ ಕುಡಿಯುವುದಾದರೆ ಮಲಗುವ ಮುನ್ನ ಕನಿಷ್ಠ 2ರಿಂದ 3 ಗಂಟೆಗಳ ಮೊದಲು ಕುಡಿಯಬಹುದು.
ದಿನವಿಡೀ 2ರಿಂದ 3 ಕಪ್ ಹಸಿರು ಚಹಾವನ್ನು ಸೇವಿಸಿದರೆ ಸಾಕಷ್ಟು ಲಾಭಗಳನ್ನು ಪಡೆಯಬಹುದು. ಆದರೆ, 3 ಕಪ್ಗಿಂತ ಹೆಚ್ಚು ಗ್ರೀನ್ ಟೀ ಕುಡಿದರೆ ಅಡ್ಡ ಪರಿಣಾಮಗಳು ಉಂಟಾಗುವ ಸಾಧ್ಯತೆಗಳೇ ಹೆಚ್ಚಾಗಿರುತ್ತವೆ. ಇದರಿಂದ ರಕ್ತಹೀನತೆ, ವಾಕರಿಕೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳು ಎದುರಾಗಬಹುದು.
ತೂಕ ಇಳಿಕೆಗೆ ಗ್ರೀನ್ ಟೀ ಅತ್ಯುತ್ತಮ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದು ನಮ್ಮನ್ನು ಆರೋಗ್ಯವಾಗಿರಿಸುತ್ತದೆ ಮತ್ತು ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಗ್ರೀನ್ ಟೀಯಲ್ಲಿ ಪಾಲಿಫಿನಾಲ್‌ಗಳು ಮತ್ತು ಕೆಫೀನ್ ಇರುತ್ತದೆ. ದಿನದಲ್ಲಿ 3 ಕಪ್ ಗಿಂತ ಹೆಚ್ಚು ಕಪ್ ಗ್ರೀನ್ ಟೀ ಕುಡಿಯಬೇಡಿ. ಇದು ನಿರ್ಜಲೀಕರಣಕ್ಕೆ ಕಾರಣವಾಗಬಹುದು. ಅತಿಯಾದ ಕೆಫೀನ್ ವಾಂತಿ, ಅತಿಸಾರ, ಹೊಟ್ಟೆ ನೋವಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಊಟಕ್ಕೆ ಮುಂಚೆ ಗ್ರೀನ್ ಟೀಯನ್ನು ಸೇವಿಸುವುದರಿಂದ ಮಲಬದ್ಧತೆ, ಹೊಟ್ಟೆ ನೋವು ಅಥವಾ ವಾಕರಿಕೆ ಉಂಟಾಗಬಹುದು. ಮಲಗುವ ಮುನ್ನ ಗ್ರೀನ್ ಟೀ ಕುಡಿಯುವುದರಿಂದ ನಿದ್ದೆ ಕೂಡ ಬರುವುದಿಲ್ಲ. ಆದ್ದರಿಂದ, ದಿನಕ್ಕೆ ಒಂದು ಅಥವಾ ಎರಡು ಕಪ್ ಗ್ರೀನ್ ಟೀ ಮಾತ್ರ ಕುಡಿಯುವುದು ಒಳ್ಳೆಯದು.
ಗ್ರೀನ್ ಟೀ ಕುಡಿಯಲು ಉತ್ತಮ ಸಮಯ ಯಾವುದು?
ನೀವು ದಿನನಿತ್ಯ ವ್ಯಾಯಾಮ ಮಾಡುವುದಾದರೆ ಆ ವ್ಯಾಯಾಮ ಮಾಡುವುದಕ್ಕೂ ಮುಂಚೆ ಗ್ರೀನ್ ಟೀಯನ್ನು ಸೇವಿಸಿ. ಗ್ರೀನ್ ಟೀಯನ್ನು ರಾತ್ರಿ ಮಲಗುವ ಎರಡು ಗಂಟೆಗಳ ಮುನ್ನ ಸೇವಿಸಿ. ಗ್ರೀನ್ ಟೀಯನ್ನು ಖಾಲಿ ಹೊಟ್ಟೆಯಲ್ಲಿ ಅಥವಾ ಬೆಳಗ್ಗೆ ಎದ್ದ ಕೂಡಲೇ ಸೇವಿಸಬಾರದು. ಇದರಲ್ಲಿರುವ ಹೆಚ್ಚಿನ ಕೆಫೇನ್ ಯಕೃತ್ ಗೆ ಅಪಾಯಕಾರಿ.
-ಶ್ವೇತಾ ಮುಂಡ್ರುಪ್ಪಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು
Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…
Zakir Hussain ; ಸರಸ್ವತಿ, ಗಣಪತಿಯ ಆರಾಧಕರಾಗಿದ್ದರು ತಬಲಾ ಮಾಂತ್ರಿಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.