ಆರೋಗ್ಯಕರ ಬದುಕಿಗೆ ಕಾಳುಮೆಣಸಿನ ಸೂತ್ರ
ಆದರ್ಶ ಕೊಡಚಾದ್ರಿ, Jul 12, 2021, 12:32 PM IST
ಕರಿಮೆಣಸು ಒಂದು ಸಾಂಬಾರ ಬೆಳೆಯಾಗಿದ್ದು, ಪ್ರಾಚೀನ ಕಾಲದಿಂದಲೂ ಆಹಾರ ಪದಾರ್ಥಗಳನ್ನು ತಯಾರಿಸುವುದು ಮಾತ್ರವಲ್ಲದೆ ಆಯುರ್ವೇದ ಔಷಧಗಳಲ್ಲೂ ಉಪಯೋಗಿಸುತ್ತಾರೆ.
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಅಧಿಕವಾಗಿ ಬೆಳೆಯಲಾಗುವ ಈ ಕರಿಮೆಣಸಿನ ಬಳ್ಳಿಯ ಹಣ್ಣನ್ನು ಒಣಗಿಸಿ ಕರಿಮೆಣಸಿನ ಕಾಳುಗಳನ್ನು ಪಡೆಯುವರು. ಭಾರತದಲ್ಲಿ ಮಾತ್ರವಲ್ಲದೆ ವಿದೇಶಿ ಆರೋಗ್ಯ ಪದ್ದತಿಯಲ್ಲಿಯೂ ಬಹಳಷ್ಟು ಹೆಚ್ಚಾಗಿ ಬಳಕೆ ಮಾಡುವ ಈ ಕಾಳುಮೆಣಸು, ತಿನ್ನುವ ಆಹಾರ ಪದಾರ್ಥಗಳ ರುಚಿಯನ್ನು ಹೆಚ್ಚಿಸುವುದರೊಂದಿಗೆ ಹಲವು ರೀತಿಯ ಆರೋಗ್ಯದ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.
ಕಾಳು ಮೆಣಸಿನ ಉಪಯೋಗಗಳು
– ಕಾಳುಮೆಣಸನ್ನು ಹಾಲಿನೊಂದಿಗೆ ಚೆನ್ನಾಗಿ ತೇದು ಈ ಮಿಶ್ರಣವನ್ನು ಹಚ್ಚುವುದರಿಂದಾಗಿ ಉಳುಕಿನ ಕಾರಣದಿಂದ ಉಂಟಾಗುವ ನೋವನ್ನು ಇದು ಕಡಿಮೆ ಮಾಡುತ್ತದೆ.
– ಒಂದು ಚಮಚ ಕಾದ ತುಪ್ಪಕ್ಕೆ ಕಾಳುಮೆಣಸಿನ ಪುಡಿ ಮತ್ತು ಉಪ್ಪು ಸೇರಿಸಿ ಅನ್ನದಲ್ಲಿ ಹಾಕಿಕೊಂಡು ತಿಂದರೆ ಅಜೀರ್ಣ ಹೊಟ್ಟೆ, ಉಬ್ಬರ ದೂರವಾಗುತ್ತದೆ.
-ಕಾಳುಮೆಣಸನ್ನು ಜಜ್ಜಿ ಬಾಯಲ್ಲಿ ಹಾಕಿಕೊಂಡು ರಸವನ್ನು ನುಂಗುತ್ತಿದ್ದರೆ ನೆಗಡಿ ನಿವಾರಣೆಯಾಗುತ್ತದೆ.
-ಕಾಳುಮೆಣಸಿನ ಪುಡಿ ಮತ್ತು ಬೆಲ್ಲವನ್ನು ಒಂದು ಲೋಟ ನೀರಿಗೆ ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ದಿನಕ್ಕೆ ಎರಡು ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುತ್ತದೆ.
-ಒಂದು ಲೋಟ ಬಿಸಿ ಹಾಲಿಗೆ ಅರ್ಧ ಚಮಚ ಅರಶಿನದ ಪುಡಿಯನ್ನು ಹಾಗೂ ಅರ್ಧ ಚಮಚ ಕಾಳು ಮೆಣಸಿನ ಪುಡಿಯನ್ನು ಸೇರಿಸಿ ಕುಡಿಯೂದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.
-ಕಾಳುಮೆಣಸು ಮತ್ತು ಚಿಟಿಕೆ ಉಪ್ಪನ್ನು ಬಾಯಿಗೆ ಹಾಕಿಕೊಂಡು ಜಗಿದು ರಸ ನುಂಗುವುದರಿಂದ ಗಂಟಲು ನೋವು ವಾಸಿಯಾಗುತ್ತದೆ.
-ಮೊಸರು ಅನ್ನಕ್ಕೆ ಕಾಳುಮೆಣಸಿನ ಪುಡಿ ಮತ್ತು ಬೆಲ್ಲವನ್ನು ಹಾಕಿಕೊಂಡು ಊಟ ಮಾಡಿದರೆ ಮೂತ್ರದ್ವಾರ ಮತ್ತು ಗುದದ್ವಾರದಲ್ಲಿ ಉಂಟಾಗುವ ಉರಿ ಕಡಿಮೆಯಾಗುತ್ತದೆ.
-ಒಂದು ಬಟ್ಟಲು ಹಾಲಿಗೆ ಒಂದು ಚಿಟಿಕೆ ಅರಿಶಿಣದ ಪುಡಿ, ಎರಡು ಚಿಟಿಕೆ ಕಾಳುಮೆಣಸಿನ ಪುಡಿಯನ್ನು ಹಾಕಿ ಚೆನ್ನಾಗಿ ಕುದಿಸಿ ರಾತ್ರಿ ಊಟ ಮಾಡಿದ ಮೇಲೆ ಕುಡಿದರೆ ನೆಗಡಿ, ಕೆಮ್ಮು ಗುಣವಾಗುತ್ತದೆ.
-ನುಗ್ಗೆ ಸೊಪ್ಪಿನ ರಸಕ್ಕೆ ಕಾಳುಮೆಣಸನ್ನು ಅರೆದು ಹಾಕಿ ಕಲಸಿ ಹಣೆಗೆ ಹಚ್ಚಿದರೆ ತಲೆನೋವು ನಿವಾರಣೆಯಾಗುತ್ತದೆ.
-ಚೆನ್ನಾಗಿ ಮಾಗಿದ ರಸ ಬಾಳೆಹಣ್ಣಿನೊಂದಿಗೆ ಅರ್ಧ ಟೀ ಚಮಚ ಕಾಳು ಮೆಣಸಿನಪುಡಿ ಸೇರಿಸಿ ದಿನದಲ್ಲಿ ಮೂರು ಬಾರಿ ಸೇವಿಸಿದರೆ ನೆಗಡಿ ಕೆಮ್ಮು ಗುಣವಾಗುತ್ತದೆ.
-ಕಾಳು ಮೆಣಸಿನ ಪುಡಿಗೆ ,ಸ್ಪಲ್ಪ ಶುಂಠಿ, ಒಂದು ಈರುಳ್ಳಿ, ಜೀರಿಗೆ, ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಸರಿಯಾಗಿ ಕುದಿಸಿ. ಚೆನ್ನಾಗಿ ಕುದ್ದ ಈ ಕಷಾಯವನ್ನು ಸೇವನೆ ಮಾಡುವುದರಿಂದ ಮಳೆಗಾಲದಲ್ಲಿ ಕಂಡುಬರುವ ಶೀತ, ಕೆಮ್ಮು ಹಾಗೂ ಜ್ವರದ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.
– ಹುಣಿಸೆ ಹಣ್ಣು, ಪುದಿನಾ, ಕಾಳುಮೆಣಸು, ಏಲಕ್ಕಿಯನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ನುಣ್ಣಗೆ ಅರೆದು ಉಪ್ಪು ಹಾಕಿ ತಿಂದರೆ ಹೊಟ್ಟೆನೋವು ಕಡಿಮೆಯಾಗುತ್ತದೆ.
-ಮೆಣಸಿನ ಕಾಳನ್ನು ನುಣ್ಣಗೆ ಅರೆದು ವಸಡಿಗೆ ಹಚ್ಚಿಕೊಂಡರೆ ಹಲ್ಲುನೋವು ದೂರವಾಗುತ್ತದೆ.
-ಒಂದು ವೀಳ್ಯದೆಲೆಗೆ 4 ಕಾಳುಮೆಣಸು ಮತ್ತು ಎರಡು ಹರಳು ಉಪ್ಪು ಹಾಕಿಕೊಂಡು ಚೆನ್ನಾಗಿ ಅಗಿದು ತಿಂದರೆ ಕಫ ಹೋಗುತ್ತದೆ.
-ಮೆಣಸಿನ ಕಾಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿಗೆ ಹಚ್ಚಿದರೆ ಮೊಡವೆ ನಿವಾರಣೆಯಾಗುವುದು.
-ಮೆಣಸಿನ ಕಾಳನ್ನು ತುಪ್ಪದಲ್ಲಿ ಹುರಿದು ನುಣ್ಣಗೆ ಪುಡಿಮಾಡಿ ಜೇನುತುಪ್ಪದಲ್ಲಿ ಬೆರೆಸಿ ದಿನಕ್ಕೆ ಎರಡು ಮೂರು ಬಾರಿ ಸೇವಿಸಿದರೆ ನೆಗಡಿ ಕೆಮ್ಮು ಮತ್ತು ರೋಗಗಳು ಕಡಿಮೆಯಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Prashant Kishor; ಸಲಹೆ ನೀಡಲು ಒಂದು ಚುನಾವಣೆಗೆ ಪಡೆಯುಯುತ್ತಿದ್ದ ಶುಲ್ಕ ಬಹಿರಂಗ!
Kambala: ಹೊಸ ಪ್ರಯೋಗದತ್ತ ಕಂಬಳ: ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ
Home made food ನಿಜವಾಗಿಯೂ ಪೋಷಕಾಂಶದಿಂದ ತುಂಬಿದೆಯೇ…?
Health benefits: ನಿಂಬೆಹಣ್ಣಿನಿಂದ ಹಲವು ಆರೋಗ್ಯ ಪ್ರಯೋಜನಗಳು…
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.