ಕನ್ನಡದಲ್ಲೂ ಬರೆಯಿರಿ ಐಬಿಪಿಎಸ್‌ ಪರೀಕ್ಷೆ !


Team Udayavani, Oct 16, 2021, 6:00 AM IST

ಕನ್ನಡದಲ್ಲೂ ಬರೆಯಿರಿ ಐಬಿಪಿಎಸ್‌ ಪರೀಕ್ಷೆ !

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಗುಮಾಸ್ತ ಹುದ್ದೆಗಳಿಗೆ ನೇಮಕ ಮಾಡುವಾಗ ಕನ್ನಡ ದಲ್ಲಿಯೂ ಪರೀಕ್ಷೆ ನಡೆಸಬೇಕೆಂಬ ಕನ್ನಡಿಗರ ಒತ್ತಡಕ್ಕೆ ಕೊನೆಗೂ ಮಣಿದಿರುವ ಕೇಂದ್ರ ಸರಕಾರ‌ ಈ ಸಂಬಂಧ ಆದೇಶ ಹೊರಡಿಸಿದೆ. ಇದರಿಂದಾಗಿ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಸೇರಿದಂತೆ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಗುಮಾಸ್ತ ಹುದ್ದೆಗಳಿಗೆ ನೇಮಕ ನಡೆಯುವಾಗ ಇಂಗ್ಲಿಷ್‌, ಹಿಂದಿಯಲ್ಲಿ ಮಾತ್ರವಲ್ಲದೆ, ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಇನ್ನು ಮುಂದೆ ಪರೀಕ್ಷೆ ನಡೆಸಲಾಗುತ್ತದೆ.

ಇದುವರೆಗೆ ಗ್ರಾಮೀಣ ಬ್ಯಾಂಕ್‌ಗಳ ನೇಮಕಾತಿ ಪರೀಕ್ಷೆ ಗಳು ಮಾತ್ರ ಸ್ಥಳೀಯ ಭಾಷೆಯಲ್ಲಿ ನಡೆಯುತ್ತಿದ್ದವು. ಈಗ ರಾಷ್ಟ್ರೀ ಕೃತ ಬ್ಯಾಂಕ್‌ಗಳೂ ಇದೇ ನಿಯಮಗಳನ್ನು ಪಾಲಿಸ ಬೇಕು. ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್‌) ಸ್ಥಗಿತ ಗೊಳಿಸಿದ್ದ ಕ್ಲರ್ಕ್‌ ಹುದ್ದೆಗಳ ನೇಮಕಾತಿ ಮುಂದುವರಿಸಲು ಹಣಕಾಸು ಸಚಿವಾಲಯವು ಒಪ್ಪಿಗೆ ನೀಡಿದೆ. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಯಲ್ಲಿ ನಡೆಸಲು ಸೂಚಿಸಿದೆ. ಉಳಿದಂತೆ ಹಿಂದಿನ ನಿಯಮಗಳೇ ಅನ್ವಯವಾಗಲಿವೆ. ಹೀಗಾಗಿ ಕಳೆದ ಜುಲೈನಲ್ಲಿ 11 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಹುದ್ದೆಗಳ ನೇಮಕಕ್ಕೆ ಹೊರಡಿಸಿದ್ದ ಅಧಿಸೂಚನೆ ಯಂತೆಯೇ ನೇಮಕ ಪ್ರಕ್ರಿಯೆ ಮುಂದುವರಿಯಲಿದೆ.

ಬ್ಯಾಂಕ್‌ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರಿ ಸುಮಾರು 7,855 ಹುದ್ದೆಗಳಿಗೆ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ರಾಜ್ಯದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 454 ಹುದ್ದೆಗಳಿಗೆ ಅರ್ಜಿ ಆಹ್ವಾನಿಸ ಲಾಗಿದೆ. ರಾಜ್ಯದ 12 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ, 3 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಅಧಿಸೂ ಚನೆಯ ಪ್ರಕಾರ 454 ಕ್ಲರ್ಕ್‌ ಹುದ್ದೆಗಳಿವೆ.

ರಾಜ್ಯದ ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆ?: ಕೆನರಾ ಬ್ಯಾಂಕ್‌ 140, ಯೂನಿ ಯನ್‌ ಬ್ಯಾಂಕ್‌ ಆಫ್‌ ಇಂಡಿಯಾ 209, ಯೂಕೋ ಬ್ಯಾಂಕ್‌ 10, ಪಂಜಾಬ್‌ ಆ್ಯಂಡ್‌ ಸಿಂಧ್‌ ಬ್ಯಾಂಕ್‌ 3, ಇಂಡಿ ಯನ್‌ ಓವಸೀìಸ್‌ ಬ್ಯಾಂಕ್‌ 28, ಇಂಡಿಯನ್‌ ಬ್ಯಾಂಕ್‌ 40, ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ 5, ಬ್ಯಾಂಕ್‌ ಆಫ್ ಮಹಾರಾಷ್ಟ್ರ 7, ಬ್ಯಾಂಕ್‌ ಆಫ್‌ ಇಂಡಿಯಾ 7 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ.

ಅರ್ಹತೆ ಏನು?: ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ಪರೀಕ್ಷೆ ಬರೆಯಬಹುದು, ಕೇಂದ್ರ ಸರಕಾರ‌ದ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿಗೆ ಸರಿಸಮನಾದ ಕೋರ್ಸ್‌ ಮಾಡಿದವರಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿ ಯು ಕಂಪ್ಯೂಟರ್‌ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿ ರುವುದು ಕಡ್ಡಾಯ, ಹೀಗಾಗಿ ಕಂಪ್ಯೂಟರ್‌ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನು ಕೂಡ ಅಭ್ಯರ್ಥಿಯು ಹೊಂದಿರಬೇಕಾಗುತ್ತದೆ.(ಕಂಪ್ಯೂಟರ್‌ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್‌/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್‌ ಅಥವಾ ಐಟಿ(Informa-tion Technology) ಯನ್ನು ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತ ನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು.

ಇದನ್ನೂ ಓದಿ:ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

ವಯೋಮಿತಿ: 20 ವರ್ಷದಿಂದ 28 ವರ್ಷದೊಳ ಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.(ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.)

ಗಮನಿಸಿ: ಜುಲೈ 12-14, 2021ರ ಅವಧಿಯಲ್ಲಿ ಯಶಸ್ವಿಯಾಗಿ ನೋಂದಾಯಿಸಿಕೊಂಡ ಅಭ್ಯ ರ್ಥಿಗಳು ಇನ್ನೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅವರ ಹಿಂದಿನ ಅರ್ಜಿಯನ್ನು ಮುಂದಿನ ಪ್ರಕ್ರಿಯೆಗಾಗಿ ಪರಿಗಣಿಸ ಲಾಗು ವುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಆಯ್ಕೆ ಯ ಆದ್ಯತೆಯ ಆದೇಶವನ್ನು ಆನ್‌ಲೈನ್‌ ಅರ್ಜಿ ನಮೂನೆ ಯಲ್ಲಿ ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್‌ಗಳ ಆದ್ಯ ತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು.

ಯಾವ್ಯಾವ ಬ್ಯಾಂಕ್‌ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ. ಒಮ್ಮೆ ನೀವು ಆಯ್ಕೆಯಾದರೆ ಬ್ಯಾಂಕ್‌ ಬದಲಾವಣೆಗೆ ಯಾವುದೇ ವಿನಂತಿ ಯನ್ನು ನಂತರದ ದಿನಗಳಲ್ಲಿ ಪರಿ ಗಣಿಸ ಲಾಗುವುದಿಲ್ಲ. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್‌ಮೆಂಟ್‌ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹ ದಲ್ಲಿ ಭಿನ್ನ ವಾಗಿ ರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದು ವಾರಿಕೆಯನ್ನ ರದ್ದುಗೊಳಿಸ ಲಾಗು ವುದು.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ದಿನಾಂಕ: 07-10-2021ರಿಂದ 27-10-2021.

ಪ್ರಿಲಿಮ್ಸ್ ನಡೆಯುವ ದಿನಾಂಕ: ಡಿಸೆಂಬರ್‌-2021.
ಪ್ರಿಲಿಮ್ಸ್ ಫಲಿತಾಂಶ: ಡಿಸೆಂಬರ್‌ 2021/ಜನವರಿ, 2022.
ಮುಖ್ಯ ಪರೀಕ್ಷೆ ನಡೆಯುವ ದಿನಾಂಕ: ಜನವರಿ/ಫೆಬ್ರವರಿ 2022 ಪ್ರಿಲಿಮ್ಸ್‌ ನಡೆಯುವ ಕೇಂದ್ರಗಳು: ಬೆಳಗಾವಿ, ಬೆಂಗಳೂರು, ಬೀದರ್‌, ಕಲಬುರಗಿ, ದಾವಣ ಗೆರೆ, ಧಾರವಾಡ, ಹುಬ್ಬಳ್ಳಿ, ಹಾಸನ, ಮಂಗ ಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.
ಮೇನ್ಸ್‌ ನಡೆಯುವ ಕೇಂದ್ರಗಳು: ಬೆಂಗಳೂರು ಹುಬ್ಬಳ್ಳಿ, ಮತ್ತು ಮಂಗಳೂರು.
ಅರ್ಜಿ ಶುಲ್ಕ: 850 ರೂ. ಉಳಿದೆಲ್ಲ ಅಭ್ಯರ್ಥಿಗಳಿಗೆ [inclusive of GST](ಎಸ್‌ಸಿ/ಎಸ್‌ಟಿ/PWBD/ EXSM ಅಭ್ಯರ್ಥಿಗಳಿಗೆ 175 ರೂ.[ inclusive of GST]. ಆನ್‌ಲೈನ್‌ನಲ್ಲಿಯೇ ಅರ್ಜಿ ಶುಲ್ಕವನ್ನೂ ಪಾವತಿಸಬೇಕಿರುತ್ತದೆ.
ಹೆಚ್ಚಿನ ಮಾಹಿತಿಗೆ ವೆಬ್‌: https://www.ibps.in
ಪರೀಕ್ಷೆ ಹೇಗೆ: ಬ್ಯಾಂಕಿಂಗ್‌ ಪರೀಕ್ಷೆಗಳು ಐಅಖ ಹಾಗೂ ಓಅಖ ಮಾದರಿ ಯಲ್ಲಿ ಎರಡು ಹಂತಗಳಲ್ಲಿ ನಡೆಯಲಿವೆ. ಪೂರ್ವ ಭಾವಿ (pre-lims), ಮುಖ್ಯ ಪರೀಕ್ಷೆ (mains). ಐಬಿ ಪಿಎಸ್‌ ನ ಗುಮಾಸ್ತರ ಹುದ್ದೆಗೆ ಸಂದಶ‌ìನ ಇರು ವುದಿಲ್ಲ. ಪೂರ್ವಭಾವಿ ಪರೀಕ್ಷೆ ಮೊದಲ ಹಂತದ ಅರ್ಹತಾ ಪರೀಕ್ಷೆಯಾಗಿದ್ದು, ಇದರಲ್ಲಿ ಅಭ್ಯರ್ಥಿ ಗಳನ್ನು 1:20ರಂತೆ ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.

ಇಂಗ್ಲಿಷ್‌ ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲಿಷ್‌,ಹಿಂದಿ,ಕನ್ನಡ ಮತ್ತು ಕೊಂಕಣಿ ಭಾಷೆ ಯಲ್ಲಿ ಇರುತ್ತದೆ. ಇದು ಈ ಸಲದ ಬಹು ಮುಖ್ಯ ಬದಲಾವಣೆಯಾಗಿದೆ. ಆದರೆ ಬ್ಯಾಂಕ್‌ ಪರೀಕ್ಷೆ ಯಲ್ಲಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಪ್ರಶ್ನೆಗಳಿಗೆ ಉತ್ತರ ಗುರುತಿ ಸಬೇಕಿರುತ್ತದೆ. ಅಲ್ಲದೆ ಬಿಡಿ ಸಿದ ಪ್ರಶ್ನೆಗಳಿಗೆ ಉತ್ತರ ಸರಿಯಾಗಿ ರಲೇಬೇಕಾದುದು ಬಹಳ ಮುಖ್ಯವಾಗಿರುತ್ತದೆ. ಏಕೆಂದರೆ ಬ್ಯಾಂಕ್‌ ಪರೀಕ್ಷೆ ಗಳಲ್ಲಿ ನೆಗೆಟಿವ್‌ ಮಾರ್ಕ್ಸ್ ಇರುತ್ತದೆ.

ಈ ಬಾರಿಯ ಬದಲಾವಣೆಗಳೇನು?: ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ನೀವು ತರುವ ಐಡಿ ಪ್ರೂಫ್‌ನ ಸಂಖ್ಯೆ ನೀಡುವುದು ಕಡ್ಡಾಯ ಹಾಗೂ ಅದು ನೀವು ಅರ್ಜಿ ಸಲ್ಲಿಸಿದ ಹೆಸರಿನೊಂದಿಗೆ ಹೊಂದಾಣಿಕೆಯಾಗಿರಬೇಕು. ಈ ಬಾರಿ ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಕೇಂದ್ರದಲ್ಲಿ ಸಂಗ್ರಹಿಸಲಾಗುವುದಿಲ್ಲ. ಬದಲಾಗಿ ಇದನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಧೃಡಪಡಿಸಿಕೊಳ್ಳುವ ಅಗತ್ಯ ವಿದೆ.

ಮೇನ್ಸ್‌ ಪರೀಕ್ಷೆಗೆ ಅರ್ಹಗೊಂಡ ಅಭ್ಯರ್ಥಿಗಳು ಮೇನ್ಸ್‌ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನು ಕೂಡ ಸಲ್ಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡ ಬಹುದು. ಕನಿಷ್ಠ 8 ಭಾವಚಿತ್ರವನ್ನು (ಅಭ್ಯರ್ಥಿ ಯು ಕಾಲ್‌-ಲೆಟರ್‌ನಲ್ಲಿ ಅಂಟಿಸಿ ದಂತೆಯೇ) ಹಾಗೂ ಪ್ರಿಲಿಮ್ಸ್ ಹಾಗೂಮೇನ್ಸ್‌ನ ಕರೆ ಪತ್ರದ ಝೆರಾಕ್ಸ್‌ ಪ್ರತಿಯನ್ನು ಅಥವಾ ಹೆಚ್ಚುವರಿ ಪ್ರಿಂಟ್‌ ತೆಗೆದಿಟ್ಟುಕೊಳ್ಳಿ. ಕೊನೆಯಲ್ಲಿ ಅದರ ಪ್ರತಿಯನ್ನು ಬ್ಯಾಂಕ್‌ಗಳಿಗೆ ಸೇರುವಾಗ ನೀಡಬೇಕು ಎಂಬುದನ್ನು ಮರೆಯಬೇಡಿ.

-ಆರ್‌.ಕೆ.ಬಾಲಚಂದ್ರ

ಟಾಪ್ ನ್ಯೂಸ್

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.