Jackfruit; ಹಲಸಿನ ಹಣ್ಣಿನ ಹಲ್ವಾ ಮಾಡೋದು ಎಷ್ಟು ಸುಲಭ ಗೊತ್ತಾ…
ಶ್ರೀರಾಮ್ ನಾಯಕ್, Apr 28, 2023, 6:00 PM IST
ಈಗಾಗಲೇ ಹಲಸಿನ ಹಣ್ಣಿನ ಸೀಸನ್ ಆರಂಭವಾಗಿದೆ.ರಸ್ತೆ ಬದಿಯಲ್ಲಿ ಹಲಸಿನ ಹಣ್ಣುಗಳ ಮಾರಾಟ ಆರಂಭವಾಗಿದ್ದು,ಇದು ಬಡವರ ಹಣ್ಣು ಎಂದೇ ಜನಜನಿತವಾಗಿದೆ.
ಈ ಹಣ್ಣು ಗಾತ್ರದಲ್ಲಿ ಹೇಗೆ ದೊಡ್ಡ ಸ್ಥಾನ ಪಡೆದಿದೆಯೋ ಹಾಗೆಯೇ ಆರೋಗ್ಯದ ದೃಷ್ಟಿಯಲ್ಲೂ ಅಷ್ಟೇ ಬಹುಮಹತ್ತರದ ಪಾತ್ರವಹಿಸಿದೆ. ಈ ಹಣ್ಣಿನಲ್ಲಿ ವಿಟಮಿನ್ ಮತ್ತು ಖನಿಜಾಂಶಗಳು ಹೇರಳವಾಗಿ ಕಂಡು ಬರುತ್ತದೆ ಮಾತ್ರವಲ್ಲದೇ ಪೊಟಾಶಿಯಂ ಹಾಗೂ ಪ್ರೋಟೀನ್ ವಿರುವುದರಿಂದ ಆರೋಗ್ಯಕ್ಕೆ ಉತ್ತಮ.
ಹಲಸಿನ ಹಣ್ಣು ತಿನ್ನುವುದಕ್ಕೆ ಅಷ್ಟೇ ಅಲ್ಲ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸುತ್ತಾರೆ. ಉದಾಃ ಚಿಪ್ಸ್ , ಹಪ್ಪಳ, ದೋಸೆ, ಕಡುಬು, ಕೇಸರಿಬಾತ್,ಐಸ್‌ಕ್ರೀಮ್, ಪಾಯಸ,ಮುಳಕ,ಹಲ್ವಾ ಸೇರಿದಂತೆ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸುತ್ತಾರೆ.
ಅಂದಹಾಗೆ ನಾವಿಂದು ಹಲಸಿನ ಹಣ್ಣಿನ ಹಲ್ವಾ ಮಾಡುವುದು ಹೇಗೆಂದು ಹೇಳಿಕೊಡುತ್ತೇವೆ.
ಹಾಗಾದರೆ ಮತ್ತೇಕೆ ತಡ “ಹಲಸಿನ ಹಣ್ಣಿನ ಹಲ್ವಾ” ಹೇಗೆ ಮಾಡುವುದು ಎಂದು ತಿಳಿದುಕೊಳ್ಳೋಣ ಬನ್ನಿ….
ಬೇಕಾಗುವ ಸಾಮಗ್ರಿಗಳು
ಹಲಸಿನ ಹಣ್ಣಿನ ತೊಳೆ-20,ತುಪ್ಪ-4 ಚಮಚ,ಒಣದ್ರಾಕ್ಷಿ, ಬಾದಾಮಿ, ಗೋಡಂಬಿ, ಬೆಲ್ಲ-1/4ಕಪ್, ಏಲಕ್ಕಿ ಪುಡಿ-ಸ್ವಲ್ಪ.
ತಯಾರಿಸುವ ವಿಧಾನ
ಮೊದಲಿಗೆ ಹಲಸಿನ ಹಣ್ಣನ್ನು ನೀರು ಸೇರಿಸದೆ ಮಿಕ್ಸಿಜಾರಿಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ರುಬ್ಬಿಕೊಂಡ ಮಿಶ್ರಣವನ್ನು ಒಂದು ಬಾಣಲೆಗೆ ಹಾಕಿ ಅದಕ್ಕೆ ಬೆಲ್ಲವನ್ನು ಸೇರಿಸಿ ಮಿಶ್ರಣವನ್ನು ಕುದಿಸುತ್ತಾ ಕೈಯಾಡಿಸುತ್ತಿರಿ. ಮಧ್ಯಮ ಉರಿಯಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಅಂದರೆ ಕಂದು ಬಣ್ಣ ಬದಲಾಗುತ್ತ ಬರುತ್ತದೆ. ಈ ಮಿಶ್ರಣ ಗಟ್ಟಿ ಹದಕ್ಕೆ ಬಂದ ನಂತರ ತುಪ್ಪವನ್ನು ಸೇರಿಸಿ ಒಮ್ಮೆಲೆ ಹಾಕಬೇಡಿ ಸ್ವಲ್ಪ-ಸ್ವಲ್ಪ ಹಾಕುತ್ತಾ ಕೈಯಾಡಿಸಿರಿ.ತದನಂತರ ಏಲಕ್ಕಿ ಪುಡಿ,ಬಾದಾಮಿ,ಒಣದ್ರಾಕ್ಷಿ ಹಾಗೂ ಗೋಡಂಬಿ ತುಂಡುಗಳನ್ನು ಸೇರಿಸಿ ಹಲ್ವಾ ಪಾತ್ರೆಯ ಬದಿಗಳನ್ನು ಬಿಡಲು ಪ್ರಾರಂಭಿಸಿದಾಗ ಅದನ್ನು ತೆಗೆಯಿರಿ. ಆ ಬಳಿಕ ಒಂದು ಬಟ್ಟಲಿಗೆ ತುಪ್ಪವನ್ನು ಸವರಿ ಮಾಡಿಟ್ಟ ಹಲ್ವಾವನ್ನು ವರ್ಗಾಯಿಸಿ ತಣಿಯಲು ಬಿಡಿ. ತದನಂತರ ನಿಮಗೆ ಬೇಕಾಗುವ ಆಕಾರದಲ್ಲಿ ತುಂಡು ಮಾಡಿದರೆ ರುಚಿಕರವಾದ ಹಲಸಿನ ಹಣ್ಣಿನ ಹಲ್ವಾ ಸವಿಯಲು ಸಿದ್ಧ.
-ಶ್ರೀರಾಮ್ ಜಿ . ನಾಯಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು
Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…
Zakir Hussain ; ಸರಸ್ವತಿ, ಗಣಪತಿಯ ಆರಾಧಕರಾಗಿದ್ದರು ತಬಲಾ ಮಾಂತ್ರಿಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.