ಕೈಗೆ ನಿಟ್ಟುಸಿರು, ಕಮಲಕ್ಕೆ ಸಮಾಧಾನ, ಬಿದ್ದ ದಳ


Team Udayavani, Dec 15, 2021, 6:45 AM IST

ಕೈಗೆ ನಿಟ್ಟುಸಿರು, ಕಮಲಕ್ಕೆ ಸಮಾಧಾನ, ಬಿದ್ದ ದಳ

ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 11, ಜೆಡಿಎಸ್‌ 2 ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ. 5 ಸ್ಥಾನ ಕಳೆದುಕೊಂಡರೂ ಜೆಡಿಎಸ್‌ ವಶದಲ್ಲಿದ್ದ 3 ಕ್ಷೇತ್ರ ಕೈ ವಶ ಮಾಡಿಕೊಂಡ ಸಂತೃಪ್ತಿ ಕಾಂಗ್ರೆಸ್‌ನದ್ದಾಗಿದೆ. ಆಡಳಿತ ಪಕ್ಷ ಬಿಜೆಪಿ ನಿರೀಕ್ಷಿತ ಸ್ಥಾನ ಗೆಲ್ಲುವ ಮೂಲಕ ನಿಟ್ಟುಸಿರು ಬಿಟ್ಟಿದೆ. “ಮೇಲ್ಮನೆಯ ಪಡಸಾಲೆ’ಯಲ್ಲಿ ಜೆಡಿಎಸ್‌ ಜಾರಿ ಬಿದ್ದಿದೆ.

3 ಕ್ಷೇತ್ರ ಹೋದರೂ ಸಂತೃಪ್ತಿ
ಬೆಂಗಳೂರು:
ಮುಂದಿನ ವಿಧಾನಸಭೆ ಚುನಾವಣೆ ದಿಕ್ಸೂಚಿ ಎಂದು ಬಿಂಬಿಸಲ್ಪಟ್ಟಿದ್ದ ವಿಧಾನಪರಿಷತ್‌ ಚುನಾವಣೆಯಲ್ಲಿ ಐದು ಸ್ಥಾನ ಕಳೆದುಕೊಂಡರೂ ಜೆಡಿಎಸ್‌ ವಶದಲ್ಲಿದ್ದ ಮೂರು ಕ್ಷೇತ್ರ ಕೈ ವಶ ಮಾಡಿಕೊಂಡ ಸಂತೃಪ್ತಿ ಕಾಂಗ್ರೆಸ್‌ನದಾಗಿದೆ.

ಹೈಕಮಾಂಡ್‌ ಕಣ್ಗಾವಲಿನಲ್ಲಿ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಸರಿಸಾಟಿಯಾಗಿ ಹೋರಾಟ ಮಾಡುವಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ಯಶಸ್ವಿಯಾಗಿದ್ದಾರೆ. 2023ರ ಚುನಾವಣೆಗೆ ಸಜ್ಜಾಗಲು ಪಕ್ಷಕ್ಕೆ ಒಂದು ರೀತಿಯಲ್ಲಿ ಬಲ ಬಂದಂತಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹಠ ಹಿಡಿದು ಟಿಕೆಟ್‌ ಪಡೆದುಕೊಂಡ ಕ್ಷೇತ್ರಗಳಲ್ಲಿ ಅಭ್ಯರ್ಥಿ ಗಳನ್ನು ಗೆಲ್ಲಿಸಿಕೊಂಡು ತಮ್ಮ ಸಾಮರ್ಥ್ಯ ಸಾಬೀತು ಮಾಡಿದ್ದಾರೆ. ಬಳ್ಳಾರಿ ಹಾಗೂ ಕಲಬುರಗಿ ಸೋಲಿನಿಂದ ಹಿರಿಯ ನಾಯಕ ಖರ್ಗೆ ಹಿನ್ನಡೆ ಅನುಭವಿಸಿದಂತಾಗಿದೆ.

ಕೋಲಾರದಲ್ಲಿ ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ವಿರೋಧ ಹಾಗೂ ಒಳ ಏಟಿನ ಆತಂಕದ ನಡುವೆಯೂ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿ ಕೊಳ್ಳುವ ಮೂಲಕ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಎರಡು ಜಿಲ್ಲೆಗಳ ನಾಯಕತ್ವ ಬಿಗಿಗೊಳಿಸಿಕೊಂಡಿದ್ದಾರೆ.

ಮಲೆನಾಡು ಭಾಗದಲ್ಲಿ ಹಿನ್ನೆಡೆ ಅನುಭವಿಸಿದರೂ ಹಳೇ ಮೈಸೂರು ಭಾಗದಲ್ಲಿ ಸಂಖ್ಯಾಬಲ ಹೆಚ್ಚಿಸಿಕೊಂಡಿದೆ. ಬೆಳಗಾವಿಯಲ್ಲಿ ಬಿಜೆಪಿ ಹಾಗೂ ಪಕ್ಷೇತರ ಲಖನ್‌ ಜಾರಕಿ ಹೊಳಿ ಹೋರಾಟದಲ್ಲಿ ಕಾಂಗ್ರೆಸ್‌ನ ಚೆನ್ನರಾಜ್‌ ಹಟ್ಟಿ ಹೊಳಿ ಗೆಲುವು ಸಾಧಿಸಿರುವುದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿಗೆ ಪಕ್ಷದಲ್ಲಿ ಬಲ ಹೆಚ್ಚಿದಂತಾಗಿದೆ.
ಸಹೋದರ ಕಣದಲ್ಲಿದ್ದರೂ ಕಾಂಗ್ರೆಸ್‌ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಿ ಹೊಣೆಗಾರಿಕೆ ವಹಿಸಿಕೊಂಡಿದ್ದರು. ಇದರಿಂದ ಲೋಕಸಭೆ ಸೋಲಿನ ಮುಯ್ಯಿ ತೀರಿಸಿಕೊಂಡಂ ತಾಗಿದೆ. ಮತ್ತೂಂದೆಡೆ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಸಹ ರಮೇ ಶ್‌ ಜಾರಕಿಹೊಳಿ ವಿರುದ್ಧ ಮೇಲುಗೈ ಸಾಧಿಸಿದಂತಾಗಿದೆ.

ಜೆಡಿಎಸ್‌ಗೆ ಟಕ್ಕರ್‌: ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಹೊಸ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ರಾಜಕೀಯ ಎದುರಾಳಿ ಜೆಡಿಎಸ್‌ಗೆ ಟಕ್ಕರ್‌ ನೀಡಿದೆ. ಬೆಂಗಳೂರು ನಗರ, ಶಿವಮೊಗ್ಗ, ಚಿತ್ರದುರ್ಗ, ಉತ್ತರ ಕನ್ನಡ, ಕಲಬುರಗಿ ಕ್ಷೇತ್ರಗಳಲ್ಲಿ ಸೋತರೂ ಕೋಲಾರ, ತುಮಕೂರು, ಮಂಡ್ಯ ಕ್ಷೇತ್ರಗಳಲ್ಲಿ ಗೆಲವು ಸಾಧಿಸಿ ಜೆಡಿಎಸ್‌ಗೆ ರಾಜಕೀಯವಾಗಿ ಆಘಾತ ಕೊಡುವಲ್ಲಿ ಯಶಸ್ವಿಯಾಗಿದೆ.

ಮಂಡ್ಯದಲ್ಲಿ ಅಚ್ಚರಿ ಅಭ್ಯರ್ಥಿ ಸಹಕಾರ ಸಚಿವ ಎಸ್‌. ಟಿ. ಸೋಮಶೇಖರ್‌ ಅವರ ಮಾಜಿ ವಿಶೇಷಾಧಿಕಾರಿ ದಿನೇಶ್‌ ಗೂಳಿಗೌಡ ಅವರನ್ನು ಕಣಕ್ಕಿಳಿಸಿದ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರ ತಂತ್ರಗಾ ರಿಕೆ ಫಲ ಕೊಟ್ಟಿದೆ. ಮಾಜಿ ಸಚಿವ ಚೆಲುವರಾಯ ಸ್ವಾಮಿ ಪ್ರತಿಷ್ಠೆಯಾಗಿ ತೆಗೆದುಕೊಂಡು ಜಿಲ್ಲೆಯಲ್ಲಿ ಜೆಡಿಎಸ್‌ಗೆ ದೊಡ್ಡ ಮಟ್ಟದ ಗುದ್ದು ನೀಡಿದ್ದು ಆ ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಳೆದು ಕೊಂಡಿದ್ದ ಶಕ್ತಿ ಬಂದಂತಾಗಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಉಳಿಸಿ ಕೊಳ್ಳುವ ಮೂಲಕ ಡಿ.ಕೆ.ಶಿವಕುಮಾರ್‌ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದರೆ ಮೈಸೂರಿನಲ್ಲಿ ಗೆಲುವು ಪಡೆದು ಸಿದ್ದರಾಮಯ್ಯ ಬೀಗಿದ್ದಾರೆ. ಒಟ್ಟಾರೆ ಪರಿಷತ್‌ ಫಲಿತಾಂಶ ಕಾಂಗ್ರೆಸ್‌ನಲ್ಲಿ ಉತ್ಸಾಹ ಹಾಗೂ ಹುಮ್ಮಸ್ಸು ಮೂಡಿಸಿದೆ.

ರಾಜಕೀಯ ಧ್ರುವೀಕರಣ?: ಕೋಲಾರ, ತುಮಕೂರು, ಮಂಡ್ಯ, ಮೈಸೂರು ಕ್ಷೇತ್ರಗಳಲ್ಲಿನ ಕಾಂಗ್ರೆಸ್‌ ಗೆಲುವು ಮುಂದಿನ ದಿನಗಳಲ್ಲಿ ರಾಜಕೀಯ ಧ್ರುವೀಕರಣಕ್ಕೆ ಕಾರಣವಾಗಲಿದೆ ಎಂಬ ವ್ಯಾಖ್ಯಾನಗಳು ಕೇಳಿಬರುತ್ತಿವೆ. ಮಂಡ್ಯದಲ್ಲಿ ಅಚ್ಚರಿ ಅಭ್ಯರ್ಥಿ ದಿನೇಶ್‌ ಗೂಳಿಗೌಡ ಗೆಲುವು ಸಾಧಿಸಿರುವುದು. ಅವರ ಗೆಲುವಿಗೆ ಸಂಸದೆ ಸುಮಲತಾ ಬೆಂಬಲ ನೀಡಿರುವುದು. ತುಮಕೂರು, ಕೋಲಾರ, ಮೈಸೂರಿನಲ್ಲಿಯೂ ಕಾಂಗ್ರೆಸ್‌ ಅಭ್ಯರ್ಥಿಗೆ ಜೆಡಿಎಸ್‌ ಶಾಸಕರೇ ಮುಂದೆ ನಿಂತು ಮತ ಹಾಕಿಸಿದ್ದಾರೆ. ಜೆಡಿಎಸ್‌ ಹಾಗೂ ಬಿಜೆಪಿಯಿಂದ ಹಾಲಿ ಶಾಸಕರು ಸೇರಿ ಕಾಂಗ್ರೆಸ್‌ ಸೇರಲು ಹಲವಾರು ನಾಯಕರು ಕಾಯುತ್ತಿದ್ದು, ಫಲಿತಾಂಶದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಹಲವು ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಹೇಳಲಾಗಿದೆ.

– ಎಸ್‌.ಲಕ್ಷ್ಮೀನಾರಾಯಣ

ಸಮಾಧಾನದ ಗೆಲುವು
ಬೆಂಗಳೂರು: ಸಾಕಷ್ಟು ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ನಿರೀಕ್ಷಿತ ಸ್ಥಾನ ಗೆಲ್ಲುವ ಮೂಲಕ ನಿಟ್ಟುಸಿರು ಬಿಟ್ಟಿದೆ. ಎಲ್ಲೆಡೆಯೂ ವಿಪಕ್ಷ ಕಾಂಗ್ರೆಸ್‌ ಪ್ರಬಲ ಪೈಪೋಟಿ ನೀಡಿದ್ದು, ಮುಂದಿನ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಆಡಳಿತ ಪಕ್ಷ ಜಾಗೃತರಾಗಿರುವಂತೆ ಮಾಡಿದೆ.
ಮೇಲ್ಮನೆ ಚುನಾವಣೆಯ ಪಕ್ಷ ಹಾಗೂ ಆಭ್ಯರ್ಥಿಗಳ ವರ್ಚಸ್ಸಿಗಿಂತಲೂ ಹಣದ ಹೊಳೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿರುವುದು ಫಲಿತಾಂಶದಲ್ಲಿಯೂ ಕಂಡು ಬಂದಿದೆ. ಆಡಳಿತ ಪಕ್ಷ ಬಿಜೆಪಿ 25 ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದು ಪರಿಷತ್ತಿನಲ್ಲಿ ಸ್ಪಷ್ಟ ಬಹುಮತ ಪಡೆದು ಕೊಂಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅವರ ಸ್ಥಾನದ ಮೇಲೆ ಆಡಳಿತ ಪಕ್ಷದ ಸದಸ್ಯರು ಕಣ್ಣಿಡುವಂತೆ ಮಾಡಿದೆ.

ಆದರೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪರಿಷತ್ತಿನಲ್ಲಿ ಜೆಡಿಎಸ್‌ ಜತೆಗಿನ ಸ್ನೇಹವನ್ನು ಮುಂದುವರಿಸಿ ಕೊಂಡು ಹೋಗುವುದಾಗಿ ಹೇಳಿರುವುದು ಆಡಳಿತ ಪಕ್ಷದ ಸಭಾಪತಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸದಸ್ಯರಿಗೆ ಇನ್ನಾರು ತಿಂಗಳು ನಿರಾಸೆ ಮೂಡಿಸುವಂತೆ ಮಾಡಿದೆ.

ಹುಸಿಯಾದ ನಿರೀಕ್ಷೆ: ಬಿಜೆಪಿ ಬಹುತೇಕ ತಾನು ನಿರೀಕ್ಷಿಸಿದ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬೆಳಗಾವಿಯಲ್ಲಿ ಹಾಲಿ ವಿಧಾನ ಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಸೋಲು ಆಡಳಿತ ಪಕ್ಷಕ್ಕೆ ಹೊಡೆತ ನೀಡಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ತಮ್ಮ ಸಹೋದರ ಲಖನ್‌ ಜಾರಕಿಹೊಳಿಯನ್ನು ಗೆಲ್ಲಿಸಿಕೊಂಡು ಬರುವ ಮೂಲಕ ಆಡಳಿತ ಪಕ್ಷದ ವಿರುದ್ಧವೇ ತಮ್ಮ ಸೇಡು ತೀರಿಸಿಕೊಂಡಂತೆ ಕಾಣಿಸುತ್ತಿದೆ.

ಆದರೆ ಬಿಜೆಪಿ ಲಖನ್‌ ಜಾರಕಿಹೊಳಿ ಬಂಡಾಯ ಅಭ್ಯರ್ಥಿ ರೂಪದಲ್ಲಿಯೇ ಸ್ಪರ್ಧೆ ಮಾಡಿದ್ದರಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಪರಿಷತ್ತಿನಲ್ಲಿ ತನ್ನ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ.
ಬಿಜೆಪಿ ಹಳೇ ಮೈಸೂರು ಭಾಗದಲ್ಲಿ ವಿಶೇಷವಾಗಿ ಬೆಂಗಳೂರು ನಗರ ವಿಧಾನ ಪರಿಷತ್‌ ಕ್ಷೇತ್ರದಲ್ಲಿ ಗೋಪಿನಾಥ ರೆಡ್ಡಿ , ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್‌ನಿಂದ ಕ್ಷೇತ್ರ ಕಸಿದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ, ಬಳ್ಳಾರಿ, ಕಲಬುರಗಿ, ವಿಜಯಪುರ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕೈಯಲ್ಲಿದ್ದ ಸ್ಥಾನಗಳನ್ನು ಬಿಜೆಪಿ ವಶಪಡಿಸಿ ಕೊಂಡಿದೆ. ಆದರೆ ತುಮಕೂರಿನಲ್ಲಿ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಬಿಜೆಪಿಗೆ ನಿರೀಕ್ಷೆ ಹುಸಿಯಾಗಿದೆ. ಮಂಡ್ಯದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಕಸರತ್ತು ಫಲಿಸಿದಂತಿಲ್ಲ.

ಸಿಎಂಗೆ ಸಮಾಧಾನ: ಕಳೆದ ತಿಂಗಳು ನಡೆದಿದ್ದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ತವರು ಜಿಲ್ಲೆಯ ಹಾನಗಲ್‌ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಯ ಸೊಲಿನಿಂದ ಮುಜುಗರಕ್ಕೆ ಒಳಗಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಈ ಫಲಿತಾಂಶ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ. ನೇರವಾಗಿ ಎಲ್ಲ ಕ್ಷೇತ್ರಗಳ ಪ್ರಚಾರದಲ್ಲಿ ಸಿಎಂ ಭಾಗಿಯಾಗದಿದ್ದರೂ ತಮ್ಮ ಸಂಪುಟದ ಸಚಿವರಿಗೆ ಜವಾಬ್ದಾರಿ ನೀಡುವ ಮೂಲಕ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

ಅಲ್ಲದೇ ಯಡಿಯೂರಪ್ಪ ಅವರೂ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿ, ಪಕ್ಷದ ಅಭ್ಯರ್ಥಿಗಳು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಫಲ ನೀಡದ ಜೆಡಿಎಸ್‌ ಬೆಂಬಲ: ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಪರ ಮೃದು ಧೋರಣೆ ತಾಳಿ ಪರೋಕ್ಷ ವಾಗಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಮಾಡಿದ್ದ ಪ್ರಯತ್ನ ಬಿಜೆಪಿಗೆ ಯಾವುದೇ ರೀತಿಯ ಫಲ ನೀಡಿಲ್ಲ. ಬಹುತೇಕ ಕ್ಷೇತ್ರ ಗಳಲ್ಲಿ ಜೆಡಿಎಸ್‌ ಸ್ಥಳೀಯವಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿರುವುದು ಫಲಿತಾಂಶದಲ್ಲಿ ಕಂಡು ಬರುತ್ತಿದೆ.

-ಶಂಕರ ಪಾಗೋಜಿ

ಜೆಡಿಎಸ್‌ ತೀವ್ರ ಹಿನ್ನಡೆ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯತ್ತ ನಮ್ಮ ಗುರಿ ಎನ್ನುತ್ತಲೇ “ಮೇಲ್ಮನೆಯ ಪಡಸಾಲೆ’ಯಲ್ಲಿ ಜೆಡಿಎಸ್‌ ಜಾರಿ ಬಿದ್ದಿದೆ. ಆರು ಕ್ಷೇತ್ರಗಳಲ್ಲಿ ಸ್ಪರ್ಧಿಗಿಳಿದು ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ತೀವ್ರ ಹಿನ್ನಡೆ ಅನುಭವಿಸಿದೆ.

ಹಾಸನ ಕ್ಷೇತ್ರವನ್ನು ಕಾಂಗ್ರೆಸ್‌ನಿಂದ ವಾಪಸ್‌ ಪಡೆದುಕೊಳ್ಳುವಲ್ಲಿ ಹಾಗೂ ಮೈಸೂರು ಕ್ಷೇತ್ರವನ್ನು ಹರಸಾಹಸ ದೊಂದಿಗೆ ಉಳಿಸಿಕೊಳ್ಳುವಲ್ಲಿ ಜೆಡಿಎಸ್‌ ಯಶಸ್ವಿಯಾ ಗಿದ್ದರೆ, ಮುಖ್ಯ ವಾಗಿ ಭದ್ರಕೋಟೆ ಮಂಡ್ಯದಲ್ಲಿ ಜೆಡಿಎಸ್‌ ಆಘಾತ ಅನುಭವಿಸಿದೆ.

ಉಳಿದಂತೆ ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಕ್ಷೇತ್ರಗಳನ್ನು ಕೈಚೆಲ್ಲಿದೆ. ಈ ಮೂಲಕ ಪಕ್ಷದ ಭದ್ರ ನೆಲೆ ಆಗಿರುವ ಹಳೆ ಮೈಸೂರು ಭಾಗದಲ್ಲೇ ಜೆಡಿಎಸ್‌ ಬುಡ ಅಲುಗಾಡಿದಂತಾಗಿದೆ.

ಮಂಡ್ಯ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಖುದ್ದು ಎಚ್‌.ಡಿ. ಕುಮಾರಸ್ವಾಮಿ ವಾಸ್ತವ್ಯ ಹೂಡಿ ರಣತಂತ್ರ ರೂಪಿಸಿದ್ದರೂ ಫಲ ನೀಡಿಲ್ಲ. ತುಮಕೂರಿನಲ್ಲಿ ದೇವೇಗೌಡರ ಶ್ರಮಕ್ಕೆ ಬೆಲೆ ಸಿಕ್ಕಿಲ್ಲ. ಈ ನಡುವೆ ತಮ್ಮ ಪುತ್ರನನ್ನು ಗೆಲ್ಲಿಸುವಲ್ಲಿ ಎಚ್‌. ಡಿ. ರೇವಣ್ಣ ಯಶಸ್ವಿಯಾಗಿದ್ದಾರೆ.

ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರು ಕ್ಷೇತ್ರದಲ್ಲಿ ಮಾತ್ರ ಸ್ಪರ್ಧೆ ಎಂದು ಹೇಳಿ ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿಸುವ ದಾಳ ಉರುಳಿಸಿ ಲಾಭ ಮಾಡಿಕೊಳ್ಳುವ ತಂತ್ರಗಾರಿಕೆ ಕೈ ಕೊಟ್ಟಿದೆ.

ಸ್ಪರ್ಧಿಸಿದ್ದ 6 ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದು, ಆ ಪೈಕಿ ಕುಟುಂಬದ ಮತ್ತೊಬ್ಬ ಸದಸ್ಯನನ್ನು ಗೆಲ್ಲಿಸುವಲ್ಲಿ ಮಾತ್ರ ದಳಪತಿಗಳು ಯಶಸ್ಸು ಕಂಡಿದ್ದಾರೆ.

ಮಂಡ್ಯದಲ್ಲಿ ಒಳಹೊಡೆತ?: ಮಂಡ್ಯದಲ್ಲಿ ಹಾಲಿ ಸದಸ್ಯ ಅಪ್ಪಾಜಿಗೌಡ ವಿರುದ್ಧ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅವರ ವಿಶೇಷ ಅಧಿಕಾರಿಯಾಗಿದ್ದು, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ದಿನೇಶ್‌ ಗೂಳಿಗೌಡ ಗೆದ್ದಿದ್ದಾರೆ. ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್‌ ಸದಸ್ಯರೇ ಹೆಚ್ಚಾಗಿದ್ದಾರೆ, ಬಹುತೇಕ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್‌ ಅಧಿಕಾರದಲ್ಲಿದೆ. ಅದಾಗ್ಯೂ ಫ‌ಲಿತಾಂಶ ಉಲ್ಟಾ ಆಗಿದೆ. ತನ್ನ ಮತಗಳನ್ನಷ್ಟೇ ನೆಚ್ಚಿಕೊಂಡ ಜೆಡಿಎಸ್‌ ಬೇರೆ ಮತಗಳನ್ನು ಸೆಳೆಯಲು ಗಮನ ಕೊಟ್ಟಿಲ್ಲ. ಅತ್ತ ಸಚಿವ ನಾರಾಯಣ ಗೌಡ ಅವರೊಂದಿಗೆ ಒಳಹೊಂದಾಣಿಕೆ, ಬಿಜೆಪಿ ಮತಗಳನ್ನು ಸೆಳೆಯು ವಲ್ಲಿ ಕಾಂಗ್ರೆಸ್‌ ಯಶಸ್ವಿಯಾಯಿತು.

ಸಂಖ್ಯಾಬಲ ಕುಸಿತ: ಈ ಫಲಿತಾಂಶದಿಂದ ಮೇಲ್ಮನೆಯಲ್ಲಿ ಜೆಡಿಎಸ್‌ ಸಂಖ್ಯಾಬಲ ಕುಸಿದಿದೆ. ಹಾಲಿ 12ಮಂದಿ ಸದಸ್ಯರಿದ್ದರು. ಈಗ ಸದಸ್ಯರ ಸಂಖ್ಯೆ 10 ಆಗಲಿದೆ. ಬಹುಮತ ಬಂದರೂ ಜೆಡಿಎಸ್‌ ಅನ್ನು ಅವ ಗಣಿಸುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ 37 ಸಂಖ್ಯಾಬಲ ಹೊಂದಿರುವುದರಿಂದ ಮೇಲ್ಮನೆ ಯಲ್ಲಿ ಮಸೂದೆ ಮತ್ತಿತರ ವಿಚಾರಗಳಲ್ಲಿ ಆಡಳಿತಾರೂಢ ಪಕ್ಷಕ್ಕೆ ಜೆಡಿಎಸ್‌ ಬೆಂಬಲವೂ ಆವಶ್ಯಕ. ಆದರೂ ಸಭಾಪತಿ ವಿಚಾರದಲ್ಲಿ ಏನಾಗುತ್ತದೆ ಎಂದು ಕಾದು ನೋಡಬೇಕಾಗಿದೆ.

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.