ಮೇ 1: ಬೆವರ ಹನಿಯ ನಿಸ್ವಾರ್ಥ ಸೇವೆಗೆ ಗೌರವ ನೀಡುವ ದಿನ
Team Udayavani, May 1, 2022, 10:00 AM IST
ದುಡಿದವನಿಗೆ ಸಂಬಳ ಕೊಡುವುದು ಮಾಲೀಕನಾದರೆ ಆ ಸಂಬಳ ಕೊಡುವ ಮಟ್ಟಕ್ಕೆ ಮಾಲೀಕನನ್ನು ಬೆಳಿಸಿದವನು ನೌಕರ.
ಹಗಲು ರಾತ್ರಿ ಎಂದು ನೋಡದೇ, ಬಿಸಿಲು ಮಳೆ ಗಾಳಿಗೂ ಜಗ್ಗದೇ, ಕಠಿಣ ಪರಿಶ್ರಮ, ಸಮರ್ಪಣಾ ಭಾವಕ್ಕೆ ಇವರೇ ಪ್ರತ್ಯಕ್ಷ ಸಾಕ್ಷಿ. ಕಷ್ಟವನ್ನು ನುಂಗಿ ಖುಷಿ ಹಂಚುವವರು ಕಾರ್ಮಿಕರು. ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಬಹಳ ಹಿರಿದು. ಕಾರ್ಮಿಕರ ಶ್ರಮದಲ್ಲಿ ದೇಶದ ಅಭಿವೃದ್ಧಿಯಡಗಿದೆ. ಈ ಶ್ರಮಜೀವಿಗಳೇ ಇಲ್ಲದ ದೇಶವನ್ನು ಊಹಿಸಲು ಸಾಧ್ಯವಿದೆಯೇ? ಖಂಡಿತಾ ಇಲ್ಲ. ದುಡಿಮೆಯಿಂದಲೇ ತಮ್ಮ ಕುಟುಂಬವನ್ನು ಮುನ್ನಡೆಸುವ ಕಾರ್ಮಿಕರು ತಾವು ದುಡಿಯುತ್ತಿರುವ ಸಂಸ್ಥೆಯ ಬೆಳವಣಿಗೆಗೂ ಕಾರಣವಾಗುತ್ತಾರೆ. ಇಂತಹ ಶ್ರಮಜೀವಿಗಳ ಕೆಲಸವನ್ನು ಗೌರವಿಸುವ, ಇವರ ಶ್ರಮವನ್ನು ಗುರುತಿಸುವ, ಇವರ ಕಷ್ಟಗಳನ್ನು ಸ್ಮರಿಸುವ ಸಲುವಾಗಿ ಮೇ 1 ರಂದು ಅಂತಾರಾಷ್ಟ್ರೀಯ ಕಾರ್ಮಿಕರ ದಿನ ಎಂದು ಆಚರಿಸಲಾಗುತ್ತದೆ.
ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಕೆಲಸ ಮಾಡುವ ಕಾರ್ಮಿಕರ ದಿನವನ್ನು 1886ರಲ್ಲಿ ಅಮೇರಿಕಾದಲ್ಲಿ ಮೊದಲ ಬಾರಿಗೆ ಕಾರ್ಮಿಕರ ದಿನವನ್ನು ಆಚರಿಸಲಾಯಿತು. ದಿನಕ್ಕೆ ಕಾರ್ಮಿಕರಿಗೆ ಎಂಟು ಗಂಟೆ ಕೆಲಸದ ಅವಧಿಯನ್ನು ನಿಗದಿ ಮಾಡಬೇಕು ಎಂಬ ಆಗ್ರಹದೊಂದಿಗೆ ಶುರುವಾದ ಚಳವಳಿಗೆ ಯಶಸ್ಸು ಸಿಕ್ಕಿತ್ತು. ಇದೇ ಹೋರಾಟದ ಕಿಚ್ಚಿನಲ್ಲಿ ಉದಯಿಸಿದ್ದೇ ಕಾರ್ಮಿಕರ ದಿನಾಚರಣೆ. ಭಾರತದಲ್ಲಿ ಈ ಆಚರಣೆ ಶುರುವಾಗಿದ್ದು 1923ರಲ್ಲಿ. ವಿಶ್ವದ ನಾನಾ ಭಾಗಗಳಲ್ಲಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ದಿನದ ಮೊದಲ ಸಂಭ್ರಮಾಚರಣೆಯಲ್ಲಿ ಕಮ್ಯುನಿಸ್ಟ್ ನಾಯಕ ಮಲಯಾಪುರಂ ಸಿಂಗರವೇಲು ಚೆಟ್ಟಿಯಾರ್ ಅವರು ಕೆಂಪು ಧ್ವಜವನ್ನು ಹಾರಿಸಿದರು. ಕಾರ್ಮಿಕ ದಿನಾಚರಣೆಯನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸುವಂತೆ ಪಕ್ಷದ ಮುಖಂಡರು ಸರ್ಕಾರವನ್ನು ಒತ್ತಾಯಿಸಿ ನಿರ್ಣಯವನ್ನು ಅಂಗೀಕರಿಸಿದರು.
ಮೇ ದಿನವು ವಿವಿಧ ಸಮಾಜವಾದಿ, ಕಮ್ಯುನಿಸ್ಟ್ ಮತ್ತು ಅರಾಜಕತಾವಾದಿ ಗುಂಪುಗಳ ಪ್ರದರ್ಶನಗಳಿಗೆ ಒಂದು ಪ್ರಮುಖ ಅಂಶವಾಗಿದೆ. ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ, ಉತ್ತರ ಕೊರಿಯಾ, ಕ್ಯೂಬಾ, ಹಿಂದಿನ ಸೋವಿಯತ್ ಒಕ್ಕೂಟ, ಮತ್ತು ಇನ್ನೂ ಅನೇಕ ದೇಶಗಳಲ್ಲಿ ಮೇ ದಿನವು ಅಧಿಕೃತ ರಜಾದಿನವಾಗಿದೆ. ಕಾರ್ಮಿಕರ ಹೋರಾಟಕ್ಕೆ ಯಶಸ್ಸು ದೂರಕಿ ಇಂದಿಗೆ 141 ವರ್ಷ ವಾಗಿದೆ , ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.
ಜಗತ್ತಿನ ವಿವಿಧ ಕ್ಷೇತ್ರದಲ್ಲಿ ಕಾರ್ಮಿಕರು ದುಡಿಯುತ್ತಿದ್ದಾರೆ. ಸಮಾಜದಲ್ಲಿ ಇವರ ಪಾತ್ರ ಬಹಳ ದೊಡ್ಡದು. ಕಾರ್ಮಿಕರು ತಮ್ಮ ದುಡಿಮೆಯಿಂದ ತಮ್ಮ ಕುಟುಂಬವನ್ನು ಪೋಷಿಸುವ ಜತೆಗೆ ತಮ್ಮ ಸಂಸ್ಥೆಯ ಅಭಿವೃದ್ಧಿಗೂ ಕಾರಣರಾಗುತ್ತಾರೆ. ಈ ಮೂಲಕ ಒಂದು ದೇಶದ ಪ್ರಗತಿಗೂ ನೆರವಾಗುತ್ತಾರೆ. ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗೆ ಸೇವೆಸಲ್ಲಿಸುವ ಕಾರ್ಮಿಕರಿಗೆ ಗೌರವ ಸಲ್ಲಿಸುವ ಸಲುವಾಗಿ ಮತ್ತು ಕಾರ್ಮಿಕರ ಹಕ್ಕುಗಳನ್ನು ಉತ್ತೇಜಿಸುವ ಮತ್ತು ರಕ್ಷಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ.
ಕಾರ್ಮಿಕ ದಿನ ಆಚರಣೆ ಏಕೆ?
ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿಯು ಆ ದೇಶದ ಕಾರ್ಮಿಕರ ಮೇಲೆ ಅವಲಂಬಿತವಾಗಿರುತ್ತದೆ. ದಕ್ಷತೆಯಿಂದ ಕೂಡಿದ ಕಾರ್ಮಿಕರ ವರ್ಗದಿಂದ ಮಾತ್ರ ಆ ದೇಶ ಆರ್ಥಿಕ ಪ್ರಗತಿಯನ್ನು ಸಾಧಿಸುತ್ತಿರುತ್ತದೆ. ಕಾರ್ಮಿಕ ಎಂದರೆ ಸಾಮಾನ್ಯ ಅರ್ಥದಲ್ಲಿ ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾರಟ ಮಾಡಿ ಹಣ ಗಳಸುತ್ತಿರುವ ವ್ಯಕ್ತಿಗೆ ಕಾರ್ಮಿಕ ಎನ್ನುತ್ತೇವೆ.
ಪ್ರತಿಯೊಂದು ದೇಶದಲ್ಲಿ ದೈಹಿಕ ಇಲ್ಲವೇ ಬೌದ್ಧಿಕ ಶಕ್ತಿಯನ್ನು ಪ್ರದರ್ಶಿಸಿ ಕಾರ್ಮಿಕ ಆದಾಯವನ್ನು ಗಳಿಸಿ ತಮ್ಮ ಬದುಕಿನ ಬಂಡಿಯನ್ನು ಸಾಗಿಸುತ್ತಿರುತ್ತಾರೆ. ಈ ರೀತಿ ಆದಾಯ ಗಳಿಸುವ ವರ್ಗಕ್ಕೆ ಕಾರ್ಮಿಕ ವರ್ಗವೆಂದು ಕರೆಯುತ್ತಿದ್ದು ಪ್ರತಿಯೊಂದು ದೇಶದಲ್ಲಿ ಶೇ 60 ರಿಂದ 65 ರಷ್ಟು ಜನರು ಕಾರ್ಮಿಕ ವರ್ಗದಲ್ಲಿ ಕಂಡು ಬರುತ್ತಾರೆ.ಕೈಗಾರಿಕಾ ಕ್ರಾಂತಿಯ ನಂತರ ಅದರ ಫಲವಾಗಿ ಸಮಾಜದಲ್ಲಿ ಎರಡು ವರ್ಗಗಳು ಉದಯವಾದವು. ಒಂದು ಬಂಡವಾಳಶಾಹಿ (ಶ್ರೀಮಂತರು) ವರ್ಗ ಹಾಗೂ ಇನ್ನೊಂದು ಕಾರ್ಮಿಕ (ಬಡವರು) ವರ್ಗ. ಬಂಡವಾಳ ಶಾಹಿಗಳು ಅನಿರ್ದಿಷ್ಟ ಅವಧಿ ತನಕ ದುಡಿಸಿ ಕೊಳ್ಳುತ್ತಿದ್ದರು. ಇದನ್ನು ವಿರೋಧಿಸಿದ ಕಾರ್ಮಿಕರು ದಿನದ 8 ಗಂಟೆ ದುಡಿವ ಅವಧಿ ಎಂಬ ಬೇಡಿಕೆ ಮುಂದಿಟ್ಟರು. ದಿನದ 24 ಗಂಟೆಗಳಲ್ಲಿ 8 ಗಂಟೆ ದೈನಂದಿನ ಚಟುವಟಿಕೆಗಳನ್ನು ಪೂರೈಸುವ 8 ಗಂಟೆ ದುಡಿವ ಅವಧಿ ಹಾಗೂ ಇನ್ನುಳಿದ 8 ಗಂಟೆ ವಿಶ್ರಾಂತಿಗಾಗಿ ಮೀಸಲು ಎಂಬ ಲೆಕ್ಕಾಚಾರ ಮುಂದಿಡಲಾಯಿತು. 8 ಗಂಟೆ ದುಡಿವ ಅವಧಿ ಎಂದು ಬೇಡಿಕೆಯನ್ನು ಮುಂದಿಟ್ಟುಕೊಂಡು ಕಾರ್ಮಿಕರು ಅಮೆರಿಕದ ಚಿಕಾಗೋ ನಗರದಲ್ಲಿ ಮೇ 1, 1886 ರಂದು ಸಹಸ್ರಾರು ಸಂಖ್ಯೆಯಲ್ಲಿ ಹೋರಾಟ ಮಾಡುತ್ತಿದ್ದರು. ಹೋರಾಟವು ತೀವ್ರ ಸ್ವರೂಪ ಪಡಿದಿದ್ದರಿಂದ ಇದನ್ನು ಹತ್ತಿಕ್ಕುವದಕ್ಕಾಗಿ ಮೇ 4ರಂದು ಪೋಲಿಸರು ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿದರು. ಇದರಲ್ಲಿ ನೂರಾರು ಕಾರ್ಮಿಕರು ಸಾವನ್ನಪ್ಪಿದ್ದರು. ಇದನ್ನು ಲೆಕ್ಕಿಸದೇ ಕಾರ್ಮಿಕರು ಹೋರಾಟವನ್ನು ಮುಂದುವರಿಸಿದ್ದರಿಂದ ಕೊನೆಗೆ ನ್ಯಾಯಯುತವಾದ ದಿನದ 8 ಗಂಟೆ ಕಾರ್ಮಿಕರ ಕೆಲಸದ ಅವಧಿಯನ್ನು ಚಾಲನೆ ತಂದರು. ಇದರ ಸವಿ ನೆನಪಿಗೆ ಮೇ 1 ರಂದು ಕಾರ್ಮಿಕರ ದಿನಾಚರಣೆಯನ್ನು ಅಂತಾರಾಷ್ಟೀಯ ಮಟ್ಟದಲ್ಲಿ ಆಚರಿಸುತ್ತಾ ಬರಲಾಗುತ್ತಿದೆ.
ವಿಶ್ವ ಕಾರ್ಮಿಕ ದಿನಾಚರಣೆಯ ಶುಭಾಶಯಗಳು#Labour #labourday pic.twitter.com/KhrCrjbcOC
— Udayavani (@udayavani_web) May 1, 2022
ಭಾರತದಲ್ಲಿ ಕಾರ್ಮಿಕರನ್ನು ಸಂಘಟಿತ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರೆಂದು ವಿಭಾಗಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸ್ವಾಮ್ಯದ ಅಡಿ ದುಡಿಯುವ ಕಾರ್ಮಿಕರು ಬಹುತೇಕ ಸಂಘಟಿತ ಕಾರ್ಮಿಕರಾಗಿದ್ದು, ದೇಶದಲ್ಲಿ ಕೇವಲ ಪ್ರತಿಶತ 12 ರಿಂದ 15 ರವರೆಗೆ ಮಾತ್ರ ಕಂಡು ಬಂದಿದ್ದು ತಮ್ಮ ಸಂಘಟಿತ ಹೋರಾಟದ ಮೂಲಕ ಬೇಡಿಕೆಗಳನ್ನು ತಕ್ಕ ಮಟ್ಟಿಗೆ ಈಡೇರಿಸಿಕೊಳ್ಳುತ್ತಿದ್ದರೆ. ಇನ್ನುಳಿದ ಶೇ 85 ರಷ್ಟು ಕಾರ್ಮಿಕರು, ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಭೂ ರಹಿತ ಮಹಿಳೆ ಹಾಗೂ ಪುರುಷ ಕಾರ್ಮಿಕರು ನಗರಗಳಲ್ಲಿ ಹೋಟೆಲ್‌ಗಳಲ್ಲಿ ದುಡಿಯುವ ಕಾರ್ಮಿಕರು, ಸಣ್ಣ ಉದ್ದಿಮೆಗಳಲ್ಲಿ ದುಡಿಯುವವರು, ಈ ಮುಂತಾದ ಕ್ಷೇತ್ರಗಳಲ್ಲಿ ದುಡಿವ ಕೆಲಸಗಾರರು ಅಸಂಘಟಿತ ಕಾರ್ಮಿಕರು. ಇವರಿಗೆ ಮೂಲತಃ ನಿರ್ದಿಷ್ಟ ಕೂಲಿಯನ್ನು ನೀಡಲಾಗುವುದು. ಇಂತಹ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಸ್ವಾತಂತ್ರ ನಂತರ ಕೇಂದ್ರ ಸರ್ಕಾರ 1949ರಲ್ಲಿ ಕನಿಷ್ಠ ಕೂಲಿ ಕಾಯ್ದೆಯನ್ನು ಜಾರಿಗೆ ತಂದಿದ್ದು, ಆ ಕಾಯ್ದೆಯು ಬಹುತೇಕವಾಗಿ ಹಲ್ಲಿಲ್ಲದ ಕಾಯ್ದೆಯಾಗಿದ್ದು ಪರಿಪೂರ್ಣವಾಗಿ ಜಾರಿಯಲ್ಲಿ ತರಲು ಸಾಧ್ಯವಾಗಿಲ್ಲ.
ಒಟ್ಟಾರೆ ಭಾರತದಲ್ಲಿ ಕಾರ್ಮಿಕರು ಶೋಷಣೆಯಲ್ಲೇ ಬದುಕು ಸಾಗಿಸುತ್ತಿದ್ದು ಶ್ರಿಮಂತರು ಶ್ರೀಮಂತರಾಗಿಯೇ ಮಂದುವರೆದರೆ ಬಡವರು ಬಡವರಾಗಿಯೇ ಸಾಗುತ್ತಿದ್ದಾರೆ. ಇಂತಹ ಶೋಷಣೆಯ ವಿರುದ್ದ ಕಾರ್ಮಿಕ ಒಕ್ಕೂಟಗಳಲ್ಲಿ ಐಕ್ಯೆತೆಯನ್ನು ಕಾಪಾಡಿಕೊಂಡು ಹೋರಾಟ ಮಾಡಲು ಸದಕಾಲ ಶ್ರಮಿಸುತ್ತಿರಬೇಕು. ಆಗ ಶೋಷಣೆ ನಿಲ್ಲುತ್ತದೆ. ಇದು ಕೇವಲ ಕಾರ್ಮಿಕರ ಐಕ್ಯೆತೆಯಿಂದ ಮಾತ್ರ ಸಾಧ್ಯ.
ಯಶಸ್ವಿನಿ ಸುರೇಂದ್ರ ಗೌಡ, ಕೊಟ್ಟಿಗೆಹಾರ
ಪ್ರಥಮ ಎಂ.ಕಾಂ, ಮಾನಸ ಗಂಗೋತ್ರಿ ಮೈಸೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
ಪೊಂಗಲ್ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್ ಆಗಲಿರುವ ಚಿತ್ರಗಳ ಪಟ್ಟಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.