ಉತ್ತರ ಕರ್ನಾಟಕದಲ್ಲೂ ಮೈಸೂರು ದಸರೆಯ ವೈಭವ ಸಾರುವ ಬೊಂಬೆ ಪ್ರದರ್ಶನ
ಕಳೆದ 40 ವರ್ಷಗಳಿಂದ ಪ್ರದರ್ಶನ
Team Udayavani, Oct 10, 2021, 12:44 PM IST
ರಬಕವಿ-ಬನಹಟ್ಟಿ: ದಸರಾ ಎಂದು ಕೂಡಲೇ ಪ್ರಮುಖವಾಗಿ ನೆನಪಿಗೆ ಬರುವುದು ಜಂಬೂ ಸವಾರಿ ಹಾಗೂ ಕುಸ್ತಿಗಳು. ಅದೇ ರೀತಿ ಮನೆಯಲ್ಲಿ ಗಟ್ಟ ಕಟ್ಟಿ ಬೊಂಬೆಗಳ ಪ್ರದರ್ಶನ ಮಾಡುವುದು. ಇದು ಮೈಸೂರು ಭಾಗಕ್ಕೆ ಮಾತ್ರ ಸೀಮಿತವಾಗಿದ್ದ ಬೊಂಬೆ ಪ್ರದರ್ಶನ ಈಗ ಉತ್ತರ ಕರ್ನಾಟಕದ ಬಹುತೇಕ ಕಡೆ ಬೊಂಬೆ ಪ್ರದರ್ಶನ ನಡೆಯುತ್ತಿದ್ದು, ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಮೋಹನ ಮಹಾದೇವಪ್ಪ ಪತ್ತಾರ ಕುಟುಂಬದವರು ಸುಮಾರು 40 ವರ್ಷಗಳಿಂದ ದಸರಾ ಹಬ್ಬದಲ್ಲಿ ಬೊಂಬೆ ಪ್ರದರ್ಶನ ಮಾಡುತ್ತಾ ಬಂದಿದ್ದಾರೆ. ಇದೀಗ ಅವರ ಮನೆಯಲ್ಲಿ ದಸರೆಯ ನಿಮಿತ್ತ ಗೊಂಬೆಗಳ ಪ್ರದರ್ಶನ ಈ ಭಾಗದಲ್ಲಿ ದಸರೆಯ ವೈಭವವನ್ನು ಸಾರುತ್ತಿದೆ.
ಗೊಂಬೆಗಳ ಉತ್ಸವವು ತಮ್ಮ ಪರಿಕಲ್ಪನೆ, ಆಸಕ್ತಿಗೆ ಅನುಗುಣವಾಗಿ ವಿವಿಧ ಮಾದರಿಯ ಗೊಂಬೆಗಳನ್ನು ಸಂಗ್ರಹಿಸಿ, ಅವುಗಳನ್ನು ಮನೆಯ ಸ್ಥಳಾವಕಾಶವನ್ನು ನೋಡಿಕೊಂಡು ಜೋಡಿಸಿ ಬೆಳಕು ಮತ್ತಿತರೆಗಳಿಂದ ಶೃಂಗಾರಿಸಿ ಪ್ರದರ್ಶನಕ್ಕಿಡುತ್ತಾರೆ.
ದಸರಾ ಹಬ್ಬದ ನಿಮಿತ್ತವಾಗಿ ಬನಹಟ್ಟಿಯ ಪತ್ತಾರ ಕುಟುಂಬದವರು ತಮ್ಮ ಮನೆಯಲ್ಲಿ ಸುಂದರವಾಗಿ ಗೊಂಬೆಗಳ ಪ್ರದರ್ಶನವನ್ನು ಹಮ್ಮಿಕೊಂಡಿದ್ದಾರೆ. ವೈವಿಧ್ಯಮಯವಾದ ಗೊಂಬೆಗಳು, ಮೈಸೂರ ದಸರಾ ಮೆರವಣಿಗೆಯ ಆನೆಗಳು, ಸೇರಿದಂತೆ ಹತ್ತಾರು ಗೊಂಬೆಗಳನ್ನು ಇಟ್ಟಿದ್ದು, ಇವುಗಳಿಗೆ ಲೈಟಿಂಗ್ ಮಾಡಿ ಮತ್ತಷ್ಟು ಗಮನ ಸೆಳೆಯುವಂತೆ ಮಾಡಿದ್ದಾರೆ. ಸದ್ಯ ಬೊಂಬೆಗಳ ಸಂಖ್ಯೆ 200 ಕ್ಕೂ ಹೆಚ್ಚು ಇದ್ದು, ಪ್ರತಿ ವರ್ಷ 4 ರಿಂದ 5 ಬೊಂಬೆಗಳನ್ನು ಹೆಚ್ಚು ಹೆಚ್ಚು ಮಾಡುತ್ತಾ ಬರುತ್ತಿದ್ದಾರೆ.
ಮನೆಯ ಸದಸ್ಯರಾದ ಗೀತಾ, ಕಲಾ, ಶ್ರುತಿ, ಸ್ನೇಹಾ ಹಾಗೂ ಮಕ್ಕಳು ಈ ಗೊಂಬೆಗಳನ್ನು ಅಚ್ಚುಕಟ್ಟಾಗಿ ಇಡಲು ಸಾಕಷ್ಟು ಪರಿಶ್ರಮ ವಹಿಸಿರುತ್ತಾರೆ. ಈ ಬಾರಿಯ ಪ್ರದರ್ಶನದಲ್ಲಿ ನವದುರ್ಗೆಯರು, ವಿಷ್ಣುವಿನ ಅವತಾರ, ಕೃಷ್ಣನ ದಶಾವತಾರ, ನಾಟ್ಯ ಗಣಪತಿ, ಮದುವೆ ಮಂಟಪ, ಕೃಷ್ಣನ ರಾಸಲಿಲೇಗಳು, ಚೆನ್ನಪಟ್ಟಣದ ಬೊಂಬೆಗಳು, ಪಟ್ಟದ ಬೊಂಬೆಗಳು, ಮೈಸೂರು ಅರಮನೆ ಜಂಬು ಸವಾರಿ, ತೋಪುಗಳು, ಕಾಮದೇನು ಆಕಳು, ರಾಜಸ್ಥಾನದ ಬೊಂಬೆಗಳು ಸೇರಿದಂತೆ ಅನೇಕ ಪ್ರಕಾರದ ಬೊಂಬೆಗಳನ್ನು ಅಚ್ಚುಕಟ್ಟಾಗಿ ಜೋಡಿಸಿರುವುದು ನೋಡುಗರನ್ನು ಆಕರ್ಷಿಸಿದೆ.
ಯಾರು ಹಿಂದಿನಿಂದಲೂ ಈ ಸಂಪ್ರದಾಯವನ್ನು ಆಚರಿಸುತ್ತಾ ಬಂದಿದ್ದಾರೋ, ಅಂತಹವರ ಮನೆಯಲ್ಲಿ ಈ ಗೊಂಬೆ ಕೂಡ್ರಿಸುವುದನ್ನು ಈಗಲೂ ನೋಡಬಹುದು. ನಮ್ಮ ದೇಶದ ಪೌರಾಣಿಕ ಹಿನ್ನೆಲೆ, ಕಲೆ, ಸಂಪ್ರದಾಯ, ಜನ ಜೀವನವನ್ನು ದಸರಾ ಬೊಂಬೆಗಳು ಸಾರುತ್ತವೆ.
ಮನೆಗಳಲ್ಲಿ ಗೊಂಬೆ ಕೂರಿಸುವಾಗ ಸ್ಥಳಾವಕಾಶ ನೋಡಿಕೊಂಡು 3,5,7,9 ಹಂತಗಳಲ್ಲಿ ಕೂರಿಸುತ್ತಾರೆ. ಹೆಚ್ಚು ಗೊಂಬೆಗಳು ಹಾಗೂ ಸ್ಥಳಾವಕಾಶ ಇದ್ದವರು 9 ಹಂತಗಳಲ್ಲಿ ಕೂರಿಸಿದರೆ, ಇನ್ನು ಕೆಲವರು 7 ಹಂತಗಳಲ್ಲಿ, ಕೆಲವರು 5 ಹಂತಗಳಲ್ಲಿ ಕೂರಿಸುತ್ತಾರೆ. ಮೊದಲ ಅಂತಸ್ತಿನಲ್ಲಿ ಪಟ್ಟದ ಬೊಂಬೆ, ಕಲಶ, ಗಣಪತಿ, ಮನೆ ದೇವರು, ದೀಪಗಳು ಇವುಗಳನ್ನಿಟ್ಟು, ಎರಡು, ಮೂರು ಉಳಿದ ಅಂತಸ್ತುಗಳಲ್ಲಿ ಇತರ ಬೊಂಬೆಗಳನ್ನು ಜೋಡಿಸುತ್ತಾರೆ.
ಗೊಂಬೆ ಕೂರಿಸುವವರು ಪ್ರತೀ ವರ್ಷ ಹಳೆಯ ಗೊಂಬೆಯ ಜೊತೆಗೆ ಒಂದು ಜೋಡಿ ಹೊಸ ಗೊಂಬೆಯನ್ನು ಸೇರಿಸಿ ಗೊಂಬೆ ಕೂರಿಸಬೇಕು ಎನ್ನುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ವಾಡಿಕೆಯಾಗಿದ್ದು, ಹಾಗಾಗಿ ಪ್ರತಿಯೊಬ್ಬರು ಹಳೆ ಗೊಂಬೆ ಜೊತೆಗೆ ಹೊಸ ಗೊಂಬೆಯನ್ನು ಕೂಡ್ರಿಸುತ್ತಾರೆ. ಇತ್ತೀಚೆಗೆ ಹಳೆ ಸಂಪ್ರದಾಯದ ಬೊಂಬೆಗಳ ಜೊತೆ ಆಧುನಿಕ ಸ್ಪರ್ಶ ನೀಡಲಾಗುತ್ತಿದೆ. ಮರದ, ಮಣ್ಣಿನ ಗೊಂಬೆ ಜೊತೆಗೆ ಆಧುನಿಕ ಬೊಂಬೆಗಳನ್ನು ಪ್ರದರ್ಶನದಲ್ಲಿ ಬಳಸುತ್ತಿದ್ದಾರೆ. ಒಟ್ಟಾರೆ
ಇಂತಹ ಪ್ರದರ್ಶನಗಳು ನಮ್ಮ ಪರಂಪರೆ, ಸಂಪ್ರದಾಯವನ್ನು ಉಳಿಸಿ ಬೆಳೆಸಿಕೊಂಡು ಹೋಗುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ನಮ್ಮ ಮನೆಯಲ್ಲಿ ಸುಮಾರು 40 ವರ್ಷಗಳಿಂದ ದಸರಾ ಸಂದರ್ಭದಲ್ಲಿ ಬೊಂಬೆಗಳನ್ನು ಕೂಡ್ರಿಸುವ ಸಂಪ್ರದಾಯವಿದ್ದು, ಕಳೆದ 20 ವರ್ಷದಿಂದ ಹೊಸ ಮನೆಯಲ್ಲಿ ಜಾಗೆ ಹೆಚ್ಚಳವಾಗಿದ್ದರಿಂದ ಅದನ್ನು ಅಚ್ಚು ಕಟ್ಟಾಗಿ 7 ಹಂತದಲ್ಲಿ ಜೋಡಿಸಿ ಪ್ರದರ್ಶನ ಮಾಡುತ್ತೇವೆ. ನಮ್ಮ ಪರಂಪರೆ ಸಂಸ್ಕೃತಿ ಉಳಿದು ಬೆಳೆಯಲಿ ಎಂಬುದು ನಮ್ಮ ಆಶಯ. ಪ್ರದರ್ಶನ ನೋಡಲು ನಮ್ಮ ಆಪ್ತರು, ಸಂಬಂಧಿಕರು ಬಂದು ನೋಡಿ ಖುಷಿ ಪಡುತ್ತಾರೆ.– ವಂದನಾ ಮೋಹನ ಪತ್ತಾರ, ಬನಹಟ್ಟಿ
– ಕಿರಣ ಶ್ರೀಶೈಲ ಆಳಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಗಲಕೋಟೆ: ಕುಳಗೇರಿ ಕೆರೆಗೆ ಸೋಮನಕೊಪ್ಪ ಚರಂಡಿ ನೀರು!
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.