ರಾಷ್ಟ್ರಪತಿ ಚುನಾವಣೆ: ಸೋಲು ಕಂಡ ವಿಪಕ್ಷಗಳ ಒಗ್ಗಟ್ಟಿನ ಮಂತ್ರ
Team Udayavani, Jul 23, 2022, 10:10 AM IST
ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ನಿರೀಕ್ಷೆಯಂತೆಯೇ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಜಯಶಾಲಿಯಾಗಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್ ಇದೆ. ಒಗ್ಗಟ್ಟಿನ ಮಂತ್ರ ಹೇಳಿಕೊಂಡೇ, ವಿಪಕ್ಷಗಳ ನಡುವೆ ಬಹುದೊಡ್ಡ ಬಿರುಕೊಂದು ಇದೇ ಚುನಾವಣೆಯಲ್ಲಿ ಬಿಂಬಿತವಾಗಿದೆ. ಇದು 2024ರ ಲೋಕಸಭೆ ಚುನಾವಣೆಗೆ ಒಟ್ಟಾಗಿ ಹೋಗಬೇಕು ಎಂಬ ವಿಪಕ್ಷಗಳ ಪ್ರಯತ್ನಕ್ಕೂ ದೊಡ್ಡ ಹಿನ್ನಡೆಯಾಗಿದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.
ಭಾರೀ ಪ್ರಮಾಣದ ಅಡ್ಡಮತ
ಪೂರ್ಣ ಫಲಿತಾಂಶ ಬಂದ ಮೇಲೆ ಸಿಕ್ಕಿರುವ ಅಂಕಿ ಅಂಶಗಳ ಪ್ರಕಾರ, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು, ವಿಪಕ್ಷಗಳಿಗೆ ಸೇರಿದ 125 ಶಾಸಕರು ಮತ್ತು 17 ಮಂದಿ ಸಂಸದರಿಂದ ಮತ ಪಡೆದಿದ್ದಾರೆ. ರಾಜ್ಯವಾರು ಲೆಕ್ಕಾಚಾರದಲ್ಲಿ ಹೇಳುವುದಾದರೆ, ಅಸ್ಸಾಂನಲ್ಲಿ ಅತೀ ಹೆಚ್ಚು ಮಂದಿ ಕ್ರಾಸ್‌ವೋಟಿಂಗ್ ಮಾಡಿದ್ದಾರೆ. ಅಲ್ಲಿನ ಕಾಂಗ್ರೆಸ್ ಶಾಸಕರು ಮುರ್ಮು ಅವರಿಗೆ ಮತ ಹಾಕಿದ್ದಾರೆ. ಅಲ್ಲದೆ, ಒಟ್ಟಾರೆಯಾಗಿ ಎಂಟು ರಾಜ್ಯಗಳಲ್ಲಿ ಹೆಚ್ಚು ಕ್ರಾಸ್‌ವೋಟಿಂಗ್ ಆಗಿದೆ ಎಂದು ಹೇಳಲಾಗುತ್ತಿದೆ.
ವಿಪಕ್ಷಗಳಿಗೆ ಹಿನ್ನಡೆ
ರಾಷ್ಟ್ರಪತಿ ಚುನಾವಣೆ ಇನ್ನೂ ಒಂದು ತಿಂಗಳಿಗಿಂತ ಹೆಚ್ಚಿರುವಾಗಲೇ ವಿಪಕ್ಷ ಗಳು ಸಭೆ ಸೇರಿ ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ದ್ದವು. ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ ರಾವ್ ಅವರು ಮುಂಚೂಣಿಯಲ್ಲಿ ನಿಂತು ವಿಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡಿದ್ದರು. ಬಳಿಕ ಎನ್‌ಸಿಪಿ ನಾಯಕ ಶರದ್ ಪವಾರ್ ಅವರ ಪ್ರವೇಶವಾಯಿತು. ವಿಶೇಷ ವೆಂದರೆ, ಇಲ್ಲಿ ಕಾಂಗ್ರೆಸ್ ಅನ್ನು ಗಣನೆಗೆ ತೆಗೆದುಕೊಂಡಿದ್ದೇ ಅನಂತರದ ದಿನಗಳಲ್ಲಿ. ಮೊದಲಿಗೆ ಶರದ್ ಪವಾರ್, ಫಾರೂಕ್ ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಅವರನ್ನು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಿ ಎಂದು ವಿಪಕ್ಷಗಳು ಕೇಳಿಕೊಂಡಿದ್ದವು. ಆದರೆ ಈ ಮೂವರೂ ಒಪ್ಪದ ಕಾರಣ ಟಿಎಂಸಿಯಲ್ಲಿದ್ದ, ಬಿಜೆಪಿಯ ಮಾಜಿ ನಾಯಕ ಯಶವಂತ ಸಿನ್ಹಾ ಅವರನ್ನು ಕಣಕ್ಕೆ ಇಳಿಸಿದ್ದವು.
ಎಲ್ಲಿ ಎಷ್ಟು ಅಡ್ಡಮತ?
ಅಸ್ಸಾಂನಲ್ಲಿ 22, ಬಿಹಾರ ಮತ್ತು ಛತ್ತೀಸ್‌ಗಢದಲ್ಲಿ ತಲಾ 6,ಗೋವಾದಲ್ಲಿ ನಾಲ್ಕು, ಪಶ್ಚಿಮ ಬಂಗಾಲದಲ್ಲಿ ಒಬ್ಬರು, ಗುಜರಾತ್‌ನಲ್ಲಿ 10,ಮಧ್ಯ ಪ್ರದೇಶ 19, ಮಹಾರಾಷ್ಟ್ರದಲ್ಲಿ 16, ಮೇಘಾಲಯ 7, ಪಂಜಾಬ್‌ನಲ್ಲಿ 2,
ಒಡಿಶಾ ಮತ್ತು ರಾಜಸ್ಥಾನದಲ್ಲಿ ತಲಾ 1, ಉತ್ತರಪ್ರದೇಶದಲ್ಲಿ 12, ಉತ್ತರಾಖಂಡದಲ್ಲಿ ಇಬ್ಬರು ಮುರ್ಮು ಅವರಿಗೆ ಆತ್ಮಸಾಕ್ಷಿ ಮತ ಚಲಾಯಿಸಿದ್ದಾರೆ. ಕೇರಳದಲ್ಲಿಯೂ ಒಬ್ಬರು ಮುರ್ಮು ಅವರ ಪರವಾಗಿ ಮತ ಹಾಕಿದ್ದಾರೆ.
ದ್ರೌಪದಿ ಮುರ್ಮು ಅಭ್ಯರ್ಥಿತನದ ಚಾಣಾಕ್ಷತನ
ವಿಪಕ್ಷಗಳ ಈ ಒಗ್ಗಟ್ಟಿನ ಮಂತ್ರದ ನಡುವೆಯೇ, ಕೇಂದ್ರದಲ್ಲಿ ಆಡಳಿತದಲ್ಲಿರುವ ಎನ್‌ಡಿಎ ಬೇರೊಂದು ರೀತಿಯ ಸ್ಕೆಚ್ ಹಾಕಿತು. ಝಾರ್ಖಂಡ್‌ನ ಮಾಜಿ ರಾಜ್ಯಪಾಲರು ಮತ್ತು ಒಡಿಶಾ ಮೂಲದ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತು. ಇವರ ಅಭ್ಯರ್ಥಿತನವೇ ವಿಪಕ್ಷಗಳ ಪಾಲಿಗೆ ನುಂಗಲಾರದ ತುತ್ತಾಯಿತು. ಏಕೆಂದರೆ ಉತ್ತಮ ಇಮೇಜ್ ಇರಿಸಿಕೊಂಡಿರುವ ಮತ್ತು ದೇಶದ ಪ್ರಮುಖ ಹಿಂದುಳಿದ ಸಮುದಾಯ ಎಸ್‌ಟಿಗೆ ಸೇರಿದ ಮುರ್ಮು ಅವರನ್ನು ವಿರೋಧಿಸುವುದು ಕೆಲವು ರಾಜಕೀಯ ಪಕ್ಷಗಳಿಗೆ ಕಷ್ಟಕರವಾಯಿತು. ಹೀಗಾಗಿಯೇ ವಿಪಕ್ಷ ಅಭ್ಯರ್ಥಿ ಯಶವಂತ ಸಿನ್ಹಾ ಅವರ ಆಯ್ಕೆಯಲ್ಲಿ ಮುಂಚೂಣಿಯಲ್ಲಿದ್ದ ಝಾರ್ಖಂಡ್ ಮುಕ್ತಿ ಮೋರ್ಚಾದ ಹೇಮಂತ್ ಸೊರೆನ್ ಅನಿವಾರ್ಯವಾಗಿ ಮುರ್ಮು ಅವರ ಅಭ್ಯರ್ಥಿತನವನ್ನು ಒಪ್ಪಿಕೊಳ್ಳಬೇಕಾಯಿತು.
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಏನಾಗಬಹುದು?
ರಾಷ್ಟ್ರಪತಿ ಚುನಾವಣೆಯೇ ಬೇರೆ, ಉಪರಾಷ್ಟ್ರಪತಿ ಚುನಾವಣೆಯೇ ಬೇರೆ. ರಾಷ್ಟ್ರಪತಿ ಚುನಾವಣೆಗೆ ಲೋಕಸಭೆ, ರಾಜ್ಯಸಭೆ ಮತ್ತು ವಿಧಾನಸಭೆಗಳ ಸದಸ್ಯರು ಮತ ಹಾಕುತ್ತಾರೆ. ಆದರೆ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಕೇವಲ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಮಾತ್ರ ಮತ ಚಲಾಯಿಸುತ್ತಾರೆ. ಈಗಾಗಲೇ ಎನ್‌ಡಿಎ ಕಡೆಯಿಂದ ಜಗದೀಪ್ ಧನ್ಕರ್ ಮತ್ತು ವಿಪಕ್ಷಗಳ ಕಡೆಯಿಂದ ಮಾರ್ಗರೆಟ್ ಆಳ್ವ ಅವರು ಸ್ಪರ್ಧಿಸಿದ್ದಾರೆ. ಈಗಿನ ಲೆಕ್ಕಾಚಾರಗಳ ಪ್ರಕಾರ, ಎನ್‌ಡಿಎ ಅಭ್ಯರ್ಥಿಗೆ ಗೆಲುವು ಸುಲಭ. ಇದಕ್ಕೆ ಕಾರಣ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಎನ್‌ಡಿಎ ಸ್ಪಷ್ಟ ಬಹುಮತ ಹೊಂದಿದೆ. ಆದರೆ ಈಗ ವಿಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲೇ ಒಡಕು ಮೂಡಿದೆ. ತಮ್ಮನ್ನು ಕೇಳದೇ ಮಾರ್ಗರೆಟ್ ಆಳ್ವ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆರೋಪಿಸಿರುವ ಟಿಎಂಸಿ, ಮತದಾನದಿಂದಲೇ ದೂರ ಉಳಿಯುವುದಾಗಿ ಹೇಳಿದೆ. ಈ ಮೂಲಕ ವಿಪಕ್ಷಗಳಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ಇದು ಬಹಿರಂಗಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.