Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

2014 ರಲ್ಲಿ ಮೋದಿಯವರನ್ನು ಅಧಿಕಾರಕ್ಕೆ ತಂದ ಅಭೂತಪೂರ್ವ ಪ್ರಯತ್ನಗಳು ಈ ಚುನಾವಣೆಯಲ್ಲಿ ಮೀರಿಸಿದೆ!

ವಿಷ್ಣುದಾಸ್ ಪಾಟೀಲ್, Nov 23, 2024, 8:34 PM IST

RSS

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಐತಿಹಾಸಿಕ ಜಯ ಸಾಧಿಸುವಲ್ಲಿ ಬಿಜೆಪಿಯ ಸೈದ್ಧಾಂತಿಕ ಮೂಲ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಬಲು ದೊಡ್ಡ ಪಾತ್ರ ವಹಿಸಿದೆ. ಲೋಕಸಭೆ ಚುನಾವಣೆಯಲ್ಲಿ 48 ಸ್ಥಾನಗಳ ಪೈಕಿ ಆಡಳಿತಾರೂಢ ಮೈತ್ರಿಕೂಟ ಮಹಾಯುತಿ  17ರಲ್ಲಿ ಮಾತ್ರ ಗೆದ್ದು ಆಘಾತಕಾರಿ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ ಆರ್ ಎಸ್ ಎಸ್ ಜಾಗೃತವಾಗಿ ಕೆಲಸ ಆರಂಭಿಸಿತ್ತು. ಸಾವಿರಾರು ಸ್ವಯಂ ಸೇವಕರು ಸದ್ದಿಲ್ಲದೇ ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಶುರು ಮಾಡಿಕೊಂಡಿದ್ದರು.

ಅತುಲ್ ಲಿಮಾಯೆಗೆ ಮಹತ್ವದ ಜವಾಬ್ದಾರಿ

ಆರ್‌ಎಸ್‌ಎಸ್‌ನ ಪಶ್ಚಿಮ ಪ್ರಾಂತದ ಮಾಜಿ ಮುಖ್ಯಸ್ಥ ಮತ್ತು ಈಗ ಜಂಟಿ ಪ್ರಧಾನ ಕಾರ್ಯದರ್ಶಿ ಅತುಲ್ ಲಿಮಾಯೆ ಅವರನ್ನು ಸಂಘಟನೆಯ ನೇತೃತ್ವ ವಹಿಸಲು ಸಂಘ ನೇಮಿಸಿತ್ತು. ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರೊಂದಿಗೆ ಮತ್ತು ದೆಹಲಿಯ ಬಿಜೆಪಿ ನಾಯಕರೊಂದಿಗೆ, ವಿಶೇಷವಾಗಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ಆರ್‌ಎಸ್‌ಎಸ್ ಮತ್ತು ಬಿಜೆಪಿ ನಡುವಿನ ಸಂಯೋಜಕ ಅರುಣ್ ಕುಮಾರ್ ಅವರೊಂದಿಗೆ ಲಿಮಾಯೆ ಸಹಕರಿಸಿ ಕೆಲಸ ನಿರ್ವಹಿಸಿ ಯಶಸ್ಸನ್ನು ಕಂಡಿದ್ದಾರೆ.

ಮಹಾಯುತಿ ಅತ್ಯಮೋಘ ವಿಜಯದ ಹಿಂದಿನ ಮಾಸ್ಟರ್‌ಮೈಂಡ್ 54ರ ಹರೆಯದ ಅತುಲ್ ಲಿಮಾಯೆ, ನಾಸಿಕ್‌ ಮೂಲದ ಎಂಜಿನಿಯರ್. ಲಿಮಾಯೆ ಅವರು ಸುಮಾರು ಮೂರು ದಶಕಗಳ ಹಿಂದೆ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಉನ್ನತ ಹುದ್ದೆ ತೊರೆದು ಪೂರ್ಣ ಸಮಯದ ಆರ್‌ಎಸ್‌ಎಸ್ ಪ್ರಚಾರಕರಾಗಿದ್ದರು.

1977 ರ ತುರ್ತು ಪರಿಸ್ಥಿತಿಯ ನಂತರದ ಚುನಾವಣೆಗಳು, 2014 ರಲ್ಲಿ ನರೇಂದ್ರ ಮೋದಿಯವರನ್ನು ಅಧಿಕಾರಕ್ಕೆ ತಂದ ಪ್ರಚಾರದ ಸಮಯದಲ್ಲಿ ಆರ್‌ಎಸ್‌ಎಸ್ ಮಾಡಿದ ಅಭೂತಪೂರ್ವ ಪ್ರಯತ್ನಗಳು ಈ ಚುನಾವಣೆಯಲ್ಲಿ ಮೀರಿಸಿದೆ ಎಂದು ದೀರ್ಘಾವಧಿಯ ಸಂಘದ ಪ್ರಚಾರಕ್ ದಿಲೀಪ್ ದಿಯೋಧರ್ ಹೇಳಿಕೊಂಡಿರುವುದು ಸಂಘದ ಕಾರ್ಯ ಶೈಲಿಗೆ ಸಾಕ್ಷಿಯಾಗಿದೆ.

ಅನಾಮಧೇಯರಾಗಿ ಉಳಿಯಲು ಬಯಸುವ ಅನೇಕ ಆರ್‌ಎಸ್‌ಎಸ್ ನಾಯಕರು, ಕಾರ್ಯಕರ್ತರು ಸದ್ದಿಲ್ಲದೆ ಮನೆ-ಮನೆ ಪ್ರಚಾರದ ಜತೆಗೆ, ಆರ್‌ಎಸ್‌ಎಸ್ ಇತರ ಹಿಂದುಳಿದ ವರ್ಗಗಳ, ಸಣ್ಣ ಸಮುದಾಯಗಳ ನಾಯಕರೊಂದಿಗೆ ತೊಡಗಿಸಿಕೊಂಡಿದ್ದರು. ಬಿಜೆಪಿಯಿಂದ ಕೆಲ ಸಮುದಾಯಗಳಿಗೆ ಚುನಾವಣಾ ರಾಜಕೀಯದಲ್ಲಿ ಸಾಕಷ್ಟು ಪ್ರಾತಿನಿಧ್ಯ ಮತ್ತು ಕಲ್ಯಾಣ ಸೌಲಭ್ಯಗಳನ್ನು ಒದಗಿಸಬಹುದು ಎಂದು ಅವರು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಲಿಮಾಯೆ ಅವರು ನಾಯಕರೊಂದಿಗೆ ಹಲವಾರು ಸುತ್ತಿನ ಸಭೆಗಳನ್ನು ನಡೆಸಿದ್ದರು. ಮರಾಠ ನಾಯಕ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ಪ್ರಬಲವಾದ ಕೃಷಿ ಸಮುದಾಯವನ್ನು ಬಿಜೆಪಿ ವಿರುದ್ಧ ತಿರುಗಿಸುವ ಪ್ರಯತ್ನಗಳ ಅಲ್ಲೇ ತಣ್ಣಗಾಗಿಸಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿ ಮಾಡಿದ್ದು ಆರ್ ಎಸ್ ಎಸ್ ನಾಯಕರೇ ಎನ್ನುವುದು ಈಗ ಬಹಿರಂಗವಾಗಿದೆ.

ಗೆಲುವಿನಲ್ಲಿ ನಿರ್ಣಾಯಕವೆನಿಸುವ ಮರಾಠ ನಾಯಕರನ್ನು ಲಿಮಾಯೆ ಮತ್ತು ಅವರ ತಂಡ ತಲುಪಿ, ನಿಮ್ಮನ್ನು ಒಬಿಸಿ ಎಂದು ವರ್ಗೀಕರಿಸದೆ ಮೀಸಲಾತಿಯನ್ನು ಪ್ರಾಮಾಣಿಕವಾಗಿ ಬೆಂಬಲಿಸುತ್ತೇವೆ ಎಂದು ಭರವಸೆ ನೀಡಿತ್ತು. ಜಾರಂಗೆ ಪ್ರಭಾವವನ್ನು ತಗ್ಗಿಸುವ ಉದ್ದೇಶದಿಂದ ಸುಪ್ರೀಂ ಕೋರ್ಟ್‌ನಲ್ಲಿ ಮತ್ತು ಕೇಂದ್ರದ ನರೇಂದ್ರ ಮೋದಿ ಸರಕಾರದೊಂದಿಗೆ ಈ ವಿಷಯ ಮುಂದುವರಿಸುವುದಾಗಿ ಅವರು ಭರವಸೆ ನೀಡಿದ್ದರು.

ನಿತಿನ್ ಗಡ್ಕರಿ, ಫಡ್ನವಿಸ್ ಜತೆಗೂಡಿ ಚುನಾವಣೆಯಲ್ಲಿ ಆರ್ ಎಸ್ ಎಸ್ ಅದ್ಭುತವನ್ನೇ ಮಾಡಿದೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ವಕ್ತಾರ ಮೌಲಾನಾ ಸಜ್ಜದ್ ನೊಮಾನಿ ಅವರು ಮುಸ್ಲಿಮರಲ್ಲಿ “ಮತ ಜಿಹಾದ್” ಗಾಗಿ ಕರೆ ನೀಡಿದ ನಂತರ ಫಡ್ನವಿಸ್ ಧರ್ಮಯುದ್ಧಕ್ಕೆ ಕರೆ ನೀಡಿದ್ದು ಭಾರೀ ಪ್ರಭಾವ ಬೀರಿದೆ ಎನ್ನಬಹುದು.

2024 ರ ಲೋಕಸಭಾ ಚುನಾವಣೆಯಲ್ಲಿ ಜಾತಿ ಗಣತಿಗೆ ರಾಹುಲ್ ಗಾಂಧಿಯವರ ಒತ್ತಾಯ, ಜಾತಿ ಲೆಕ್ಕಾಚಾರ ಹಿಂದುಳಿದ ವರ್ಗಗಳ ಮತ ಗಳಿಸಿಕೊಟ್ಟಿದ್ದರೆ, ಬಿಜೆಪಿಯ ಸಾಂಪ್ರದಾಯಿಕ ಬೆಂಬಲದ ನೆಲೆಯ ಸವಾಲು ಸ್ವೀಕರಿಸಿ ಈ ಚುನಾವಣೆಯಲ್ಲಿ ಹಿಂದುಳಿದ ವರ್ಗ ಮತ್ತು ವಿಶೇಷವಾಗಿ ಸೂಕ್ಷ್ಮಒಬಿಸಿ ಮತದಾರರನ್ನು ಸೆಳೆಯಲು ಆರ್ ಎಸ್ ಎಸ್ ತೊಡಗಿಸಿಕೊಳ್ಳುವ ಮೂಲಕ ಬಿಜೆಪಿ ಶಿಂಧೆ ಬಣದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಪರವಾಗಿ ಹಿಂದೂ ಮತಗಳನ್ನು ಕ್ರೋಢೀಕರಿಸುವಲ್ಲಿ ಯಶಸ್ವಿಯಾಯಿತು.

ಬಿಜೆಪಿಯೊಂದೆ 132 ಸ್ಥಾನಗಳನ್ನು ಗೆಲ್ಲುವುದು ಅಷ್ಟು ಸುಲಭದ ಮಾತೇನಲ್ಲ. ಶಿಂಧೆ ಶಿವಸೇನೆ 57 ಮತ್ತು ಅಜಿತ್ ಪವಾರ್ ಅವರ ಎನ್ ಸಿಪಿ 41 ಸ್ಥಾನಗಳನ್ನು ಗೆಲ್ಲಲು ಯಶಸ್ವಿಯಾಗಿದೆ. ಎನ್ ಡಿಎ ಒಟ್ಟು 234 ಸ್ಥಾನಗಳನ್ನು ಗೆದ್ದು ಐತಿಹಾಸಿಕ ಜಯ ತನ್ನದಾಗಿಸಿಕೊಂಡಿದೆ.

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು

3-winter-foods

Winter: ಚಳಿಗಾಲದಲ್ಲಿ ಆರೋಗ್ಯಕರವಾಗಿರಲು ಸೇವಿಸಬೇಕಾದ ಆಹಾರಗಳು ಇವು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.