ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ದಕ್ಷಿಣ ಕನ್ನಡ
Team Udayavani, Feb 22, 2022, 11:55 AM IST
ಯೋಜನೆಗೆ ಅಂತಿಮ ರೂಪ
ಮಂಗಳೂರು ತಾಲೂಕಿನ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವು ನಂದಿನಿ ನದಿಯ ಮಧ್ಯದಲ್ಲಿದೆ. ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ 2014ರಲ್ಲಿಯೇ ಮಾಸ್ಟರ್ ಪ್ಲಾನ್ ತಯಾರಿಸಲಾಗಿತ್ತು. ಈಗ ಕಾಶಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಸರಕಾರ ನಿರ್ಧರಿಸಿರುವ ಕಾರಣ ಅದನ್ನು ಬದಲಾಯಿಸಲಾಗುತ್ತಿದೆ. ಯೋಜನೆಯ ರೂಪುರೇಷೆ ಸಿದ್ಧಪಡಿಸಲಾಗಿದ್ದು, ಪರಿಷ್ಕೃತ ಮಾಸ್ಟರ್ ಪ್ಲಾನ್ ತಯಾರಿಸಲಾಗುತ್ತಿದೆ. ಸಂಸತ್ ಅಧಿವೇಶನ ಮುಗಿದ ಬಳಿಕ ಸಂಸದ ನಳಿನ್ ಕುಮಾರ್ ಕಟೀಲು ಅವರ ಜತೆ ಚರ್ಚಿಸಿ, ಜಿಲ್ಲಾಧಿಕಾರಿ ಜತೆ ಸಭೆ ನಡೆಸಿದ ಬಳಿಕ ಯೋಜನೆಗೆ ಅಂತಿಮ ರೂಪ ಕೊಡಲಾಗುವುದು ಎಂದು ದೇವಸ್ಥಾನದ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ಅವರು ಮಾಹಿತಿ ನೀಡಿದ್ದಾರೆ.
ಏನೇನು ಬದಲಾವಣೆ?
ವಿಶಾಲವಾದ ವಾಹನ ಪಾರ್ಕಿಂಗ್ ಸೌಲಭ್ಯ, ಬದಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ಬಸ್ ನಿಲ್ದಾಣ ಅಭಿವೃದ್ಧಿ. ದೇವಸ್ಥಾನದ ವತಿಯಿಂದ ನಡೆಯುತ್ತಿರುವ ಶಾಲೆ ಅಭಿವೃದ್ಧಿ, ರಿಟೈನಿಂಗ್ ವಾಲ್ ನಿರ್ಮಾಣ.
ಕಾಶಿ ಮಾದರಿಯಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಸರಕಾರ ದಿಂದ ಹಣ ಸಿಗುವುದಿಲ್ಲ. ದೇವಸ್ಥಾನದ ಹಣದಿಂದಲೇ ಖರ್ಚು ಮಾಡಬೇಕಾಗಿದೆ. ಯೋಜನೆ ಮಾತ್ರ ಸರಕಾರದ್ದು. ಕೊರೊನಾದಿಂದಾಗಿ ಈಗಾಗಲೇ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದೇವೆ. ದೇವಸ್ಥಾನಕ್ಕೆ ಬರುವ ಆದಾಯ ತುಂಬಾ ಕಡಿಮೆಯಾಗಿದೆ. ಯೋಜನೆಗೆ ಸರಕಾರ ಹಣ ಕೊಟ್ಟರೆ ಉತ್ತಮ.
-ಹರಿನಾರಾಯಣದಾಸ ಆಸ್ರಣ್ಣ, ಅರ್ಚಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಅತ್ಯಗತ್ಯ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.