ಅಂಕೆ ತಪ್ಪಿದ ಹೇಳಿಕೆ ಸಿದ್ದರಾಮಯ್ಯನವರಿಗೆ ತುಟ್ಟಿಯಾಯ್ತೇ?

ನಗೆಹಬ್ಬದಂತಾಗುತ್ತಿದೆಯೆ ಕಾಂಗ್ರೆಸ್ ಕ್ರೌಡ್ ಪುಲ್ಲರ್ ಮಾತು?

Team Udayavani, Mar 28, 2022, 4:26 PM IST

ಅಂಕೆ ತಪ್ಪಿದ ಹೇಳಿಕೆ ಸಿದ್ದರಾಮಯ್ಯನವರಿಗೆ ತುಟ್ಟಿಯಾಯ್ತೇ?

ರಾಜ್ಯ ರಾಜಕಾರಣ ನಿಧಾನವಾಗಿ ಚುನಾವಣಾ ಪರ್ವಕ್ಕೆ ಹೊರಳುತ್ತಿದೆ. ರಾಜಕೀಯ ಪಕ್ಷಗಳ ಒಳಮನೆಯಲ್ಲಿ ತಂತ್ರಗಾರಿಕೆಯ ಬೀಜ ಮೊಳಕೆಯೊಡೆಯುತ್ತಿರುವ ಹೊತ್ತಿನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡುತ್ತಿರುವ ಹೇಳಿಕೆಗಳು ಈಗ ಕಾಂಗ್ರೆಸ್ ಗೆ ತುಟ್ಟಿಯಾಗಿ ಪರಿಣಮಿಸುತ್ತಿದೆಯೇ?

ಹೀಗೊಂದು ಚರ್ಚೆ ಈಗ ಮಾಧ್ಯಮದಲ್ಲಿ ಮಾತ್ರವಲ್ಲ, ಕಾಂಗ್ರೆಸ್ ನ ಆಂತರಿಕ ವಲಯದಲ್ಲೇ ಪ್ರಾರಂಭವಾಗಿದೆ. ಸಿದ್ದರಾಮಯ್ಯ ಅಂಕೆ ತಪ್ಪಿ ನೀಡುತ್ತಿರುವ ಹೇಳಿಕೆಗಳು ವೈಯಕ್ತಿಕವಾಗಿ ಮಾತ್ರವಲ್ಲ ಪಕ್ಷಕ್ಕೂ “ದುಬಾರಿ ಹೊಡೆತ”ವಾಗಿ ಬಿಡುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಇದು ಪಕ್ಷಕ್ಕೆ ಅನಪೇಕ್ಷಿತ ಬೆಳವಣಿಗೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಇದು ಕೇವಲ ಹಿಜಾಬ್ ವಿಚಾರಕ್ಕೆ ಮಾತ್ರ ಸೀಮಿತವಾಗಿ ಉಳಿದಿಲ್ಲ. ಕಳೆದೊಂದು ವರ್ಷದಿಂದಲೂ ಸಿದ್ದರಾಮಯ್ಯ ಅವರ ಹೇಳಿಕೆ ಪಕ್ಷಕ್ಕೆ ಹಿಟ್ ವಿಕೆಟ್ ಫಲಿತಾಂಶವನ್ನು ನೀಡುತ್ತಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕತ್ವದ ಜತೆಗೆ ವಿಪಕ್ಷ ನಾಯಕನ ಸ್ಥಾನಮಾನವನ್ನೂ ಸಿದ್ದರಾಮಯ್ಯ ಹೊಂದಿರುವುದರಿಂದ ಅವರ ಹೇಳಿಕೆಗಳಿಂದ ಅಂತರ ಕಾಯ್ದುಕೊಳ್ಳುವುದು ಪಕ್ಷದ ನಾಯಕರಿಗೆ ಕಷ್ಟವಾಗಿ ಪರಿಣಮಿಸುತ್ತಿದೆ.

ಸಿದ್ದರಾಮಯ್ಯ ಸೃಷ್ಟಿಸುವ “ಕ್ರಿಯೆ”ಗೆ ಬಿಜೆಪಿ ನೀಡುವ “ಪ್ರತಿಕ್ರಿಯೆ” ಕಾಂಗ್ರೆಸ್ ನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದು “ಉಭಯ ಸಂಕಟ”ದಿಂದ ಪಾರಾಗುವುದು ಹೇಗೆ ಎಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕರಿಗೆ ಇನ್ನೂ ಉತ್ತರ ದೊರೆತಿಲ್ಲ.

ಕೆಪಿಸಿಸಿಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾದ ಬಳಿಕ “ಮೃದು ಹಿಂದುತ್ವ” ಧೋರಣೆಯೊಂದಿಗೆ ಅವರು ಚುನಾವಣಾ ಕಣಕ್ಕೆ ಇಳಿಯುತ್ತಾರೆ ಎಂದು ಹೇಳಲಾಗುತ್ತಿತ್ತು. ವ್ಯಕ್ತಿಗತವಾಗಿ ಡಿಕೆ ಶಿವಕುಮಾರ್ ನಡವಳಿಕೆ ಹಿಂದುತ್ವದ ಪರವಾಗಿಯೇ ಇರುವುದರಿಂದ ಬಿಜೆಪಿ ನಡೆಸುವ ಮತಕ್ರೋಢೀಕರಣಕ್ಕೆ ಇದರಿಂದ ಸ್ವಲ್ಪ ಮಟ್ಟಿಗೆ ಹಿನ್ನಡೆ ಆಗಬಹುದೆಂಬುದು ಎಲ್ಲರ ತರ್ಕವಾಗಿತ್ತು. ಆದರೆ ಸಿದ್ದರಾಮಯ್ಯ ನೀಡುತ್ತಿರುವ ಹೇಳಿಕೆ ಈ ಎಲ್ಲ ಲೆಕ್ಕಾಚಾರವನ್ನೂ ತಲೆಕೆಳಗೆ ಮಾಡುತ್ತಿದೆ. “ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳುವುದಿಲ್ಲವೇ“ ಎಂದು ಹಿಜಾಬ್ ಜತೆಗೆ ಹಿಂದು ಧಾರ್ಮಿಕ ಸಂಕೇತಗಳನ್ನು ಸಮೀಕರಿಸಿದ್ದು ಸೇರಿದಂತೆ ಅವರ ಹೇಳಿಕೆಗಳು ಉದ್ದೇಶಪೂರ್ವಕವೋ ಅಥವಾ ಬಾಯಿ ತಪ್ಪಿನಿಂದ ಬರುವುದೋ ಎಂಬುದು ಇಲ್ಲಿನ ಅಪೇಕ್ಷಿತ ವಸ್ತುವಲ್ಲವಾದರೂ ಅದು ಪಕ್ಷಕ್ಕೆ ಹಾನಿ ಮಾಡುತ್ತಿರುವುದಂತೂ ಸುಳ್ಳಲ್ಲ.

ಈ ಕಾರಣಕ್ಕಾಗಿಯೇ ಪಕ್ಷದ ಒಂದು ವರ್ಗ ಸಿದ್ದರಾಮಯ್ಯ ಅವರನ್ನು ಪಕ್ಕಕ್ಕಿಟ್ಟು ಪ್ರತ್ಯೇಕ ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದೊಂದಿಗೆ ಚುನಾವಣಾ ಸಿದ್ಧತೆಗೆ ಇಳಿಯುವುದು ಸೂಕ್ತ ಎಂದು ವಾದಿಸಲಾರಂಭಿಸಿದ್ದು, ವಿಧಾನಸಭಾ ಅಧಿವೇಶನದ ಬಳಿಕ ದಿಲ್ಲಿಗೆ ತೆರಳಿ ಪಕ್ಷದ ವರಿಷ್ಠರ ಜತೆಗೆ ಚರ್ಚೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಅಧಿಕಾರದಲ್ಲಿ ಇಲ್ಲದೇ ಇದ್ದರು ದಕ್ಷಿಣ ಭಾರತದಲ್ಲಿ ಕರ್ನಾಟಕ ಹಾಗೂ ಕೇರಳದಲ್ಲಿ ಕಾಂಗ್ರೆಸ್ ಗೆ ಪುನಶ್ಚೇತನಗೊಳ್ಳಬಹುದಾದಷ್ಟು ಕಾರ್ಯಕರ್ತರ ಬಲವಿದೆ. ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರದಲ್ಲೂ ಅಸ್ಥಿತ್ವವಿದೆ. ಕಾಂಗ್ರೆಸ್ ಕತೆ ಮುಗಿದೇ ಹೋಯಿತು ಎಂದು ವಾದಿಸುವವರಿಗೆ ಇಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ಮೂಲಕ ಉತ್ತರ ನೀಡಬಹುದು. ಆದರೆ ಅದಕ್ಕೂ ಮೊದಲು “ತುಟ್ಟಿʼʼ ಹೇಳಿಕೆ ನೀಡುವ ನಾಯಕರ ಬಾಯಿಗೆ ಬೀಗ ಹಾಕಬೇಕೆಂಬುದು ಕೆಲ ನಾಯಕರ ವಾದವಾಗಿದೆ.

ಜಾರಿದ ಹಿಡಿತ: ಕಾಂಗ್ರೆಸ್ ನಲ್ಲಿರುವ ಸಿದ್ದರಾಮಯ್ಯ ವಿರೋಧಿ ಗುಂಪಿನ ಪ್ರಕಾರ, “ಸಿದ್ದರಾಮಯ್ಯ ಕಳೆದ ಕೆಲ ತಿಂಗಳಿಂದ ರಾಜಕೀಯ ಹಿಡಿತ ಕಳೆದುಕೊಂಡಿದ್ದಾರೆ. ಬೆಳಗಾವಿ ಅಧಿವೇಶನ ಸಂದರ್ಭದಲ್ಲೇ ಅದು ಸಾಬೀತಾಗಿದೆ. ಮತಾಂತರ ನಿಷೇಧ ಕಾಯಿದೆ ವಿಚಾರದಲ್ಲಿ ಅವರು ಬಿಜೆಪಿಯ ಬಲೆಗೆ ಬಿದ್ದ ರೀತಿಯೇ ಅದಕ್ಕೊಂದು ಉದಾಹರಣೆ. ವಿರೋಧಿಸಬೇಕೆಂಬ ಕಾರಣಕ್ಕೆ ಸೂಕ್ತ ದಾಖಲೆ, ಆಧಾರವಿಲ್ಲದೇ ವಿರೋಧಿಸಿ ಸಿಕ್ಕಿ ಬೀಳುತ್ತಾರೆ. ಹಿಜಾಬ್ ಮುಸ್ಲಿಂರ ಸಂವಿಧಾನಿಕ ಹಕ್ಕು ಎಂದು ಪ್ರತಿಪಾದಸಿದ್ದು, ಹೈಕೋರ್ಟ್ ತೀರ್ಪಿನ ಬಳಿಕ ಸೋತು ಹೋಯ್ತು. ಜೇಮ್ಸ್ ಚಿತ್ರ ಪ್ರದರ್ಶನ ರದ್ದುಪಡಿಸಿ ಕಾಶ್ಮೀರ್ ಫೈಲ್ ಗೆ ಅವಕಾಶ ನೀಡುವಂತೆ ಬಿಜೆಪಿ ಶಾಸಕರು ಚಿತ್ರಮಂದಿರ ಮಾಲೀಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಅವರ ಹೇಳಿಕೆ ಈಗ ಮಾನನಷ್ಟ ಮೊಕದ್ದಮೆಯ ಹಂತಕ್ಕೆ ಬಂದು ನಿಂತರೆ, ಧಾರ್ಮಿಕ –ದತ್ತಿ ಇಲಾಖೆಯ ಆವರಣದಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಕಾಂಗ್ರೆಸ್ ಸರಕಾರದ ಅವಧಿಯಲ್ಲೇ ಸೃಷ್ಟಿಸಿದ ನಿಯಮಗಳು ಅವರ ಕೈ ಕಟ್ಟಿ ಹಾಕಿದೆ. ಇದೆಲ್ಲವೂ ಕಾಂಗ್ರೆಸ್ ನಲ್ಲಿರುವ ಸಿದ್ದರಾಮಯ್ಯ ವಿರೋಧಿ ಬಣಕ್ಕೆ ಬಲ ನೀಡುತ್ತಿದ್ದು, ಸಿದ್ದರಾಮಯ್ಯ ಮೌನ ವಹಿಸಿದರೆ ಮಾತ್ರ ಕಾಂಗ್ರೆಸ್ ನ ಸೀಟು ಗಳಿಕೆ ಪ್ರಮಾಣ ಹೆಚ್ಚುತ್ತದೆ ಎಂದು ವಾದಿಸುತ್ತಿದ್ದಾರೆ.

ಸಿದ್ದರಾಮಯ್ಯ ಎಂದರೆ “ಕ್ರೌಡ್ ಪುಲ್ಲರ್” ಎಂದು ಪ್ರಶಂಸೆ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು ಅವರ ಮಾತುಗಳನ್ನು “ನಗೆಹಬ್ಬ” ಹಾಗೂ “ಹಾಸ್ಯೋತ್ಸವ”ಕ್ಕೆ ಹೋಲಿಕೆ ಮಾಡುತ್ತಿದ್ದು, ಅಂಕೆ ಇಲ್ಲದ ಹೇಳಿಕೆ ಈಗ ಸಿದ್ದರಾಮಯ್ಯನವರ ಕೈ ಕಟ್ಟಿ ಹಾಕುವ ಸಾಧ್ಯತೆ  ಇದೆ. ವಿಧಾನ ಮಂಡಲದ ಅಧಿವೇಶನದ ಬಳಿಕ ಕಾಂಗ್ರೆಸ್ ನಲ್ಲಿರುವ ಸಿದ್ದು ವಿರೋಧಿ ಬಣ ಎಸೆಯುವ ಗೂಗ್ಲಿ ಹೇಗಿರಲಿದೆ ಎಂಬ ಕುತೂಹಲ ಈಗ ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟು ಹಾಕಿದೆ.

ರಾಘವೇಂದ್ರ ಭಟ್

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.