ಬೀಟ್ರೂಟ್ ಬಗ್ಗೆ ನಿಮಗೆಷ್ಟು ಗೊತ್ತು : ಈ ತರಕಾರಿ ಬಗ್ಗೆ ತಿಳಿಯಲೇಬೇಕಾದ ಅಂಶ ಇಲ್ಲಿದೆ


Team Udayavani, Apr 24, 2021, 8:00 AM IST

ಹಗಜಹ್ಗ್

ತರಕಾರಿಗಳು ಮಾನವನ ಆರೋಗ್ಯದ ಮೇಲೆ ಎಷ್ಟು ಪರಿಣಾಮ ಬೀಡುತ್ತವೆ ಅಂದ್ರೆ ಊಹೆ ಮಾಡಲೂ ಸಾಧ್ಯವಿಲ್ಲ. ಆದ್ರೆ ಯಾವ ತರಕಾರಿಯನ್ನು ತಿಂದರೆ ನಮ್ಮ ದೇಹಕ್ಕೆ ಒಳ್ಳೆಯದು ಎಂಬ ವಿಚಾರವನ್ನ ತಿಳಿದರಬೇಕು ಅಷ್ಟೆ. ಇದೇ ಹಿನ್ನೆಲೆಯಲ್ಲಿ ನೋಡುವುದಾದರೆ ಬೀಟ್ರೂಟ್ ನಲ್ಲಿ ಪೋಷಕಾಂಶಗಳು ಹೇರಳವಾಗಿದ್ದು, ಈ ತರಕಾರಿಯನ್ನು ಆಹಾರದಲ್ಲಿ ನಿಯಮಿತವಾಗಿ ಸೇವನೆ ಮಾಡುವುದರಿಂದ ಸಾಕಷ್ಟು ಆರೋಗ್ಯ ಸಂಬಂಧಿ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಮಣ್ಣಿನ ಅಡಿಯಲ್ಲಿ ಸಿಗುವ ಕೆಲ ತರಕಾರಿಗಳಲ್ಲಿ ಇತರೆ ತರಕಾರಿಗಳಿಗಿಂತಲೂ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು ಹೇಳಲಾಗುತ್ತದೆ.

ಬೀಟ್ ರೂಟ್ ಕೂಡ ಮಣ್ಣಿನ ಅಡಿಯಲ್ಲಿ ಸಿಗುವ ತರಕಾರಿಯಾಗಿದ್ದು, ಅದ್ಭುತವಾದ ತರಕಾರಿ ಎಂದೇ ಹೇಳಬಹುದು. ಬೀಟ್ ರೂಟ್ ನಲ್ಲಿ ಹಲವಾರು ವಿಧದ ವಿಟಮಿನ್, ಖನಿಜಾಂಶಗಳಿವೆ. ಸಾಕಷ್ಟು ಜನ ಬೀಟ್ ರೂಟ್ ನೋಡಿದ ಕೂಡಲೇ, ಅದರ ಬಣ್ಣವನ್ನು ನೋಡಿದ ಕೂಡಲೇ ಮೂಗು ಮುರಿಯುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಇದರ ಪರಿಣಾಮ ಹಾಗೂ ಉಪಯೋಗವನ್ನು ತಿಳಿಯುತ್ತಿರುವ ಜನರು, ಬೀಟ್ ರೂಟ್ ಜ್ಯೂಸ್ ಹಾಗೂ ಸಲಾಡ್ ಗಳತ್ತ ಮುಖ ಮಾಡುತ್ತಿದ್ದಾರೆ.

ರಕ್ತ ಸಂಚಾರ ಸುಗಮ : ಬೀಟ್ ರೂಟ್ ನಲ್ಲಿ ನೈಸರ್ಗಿಕ ರಾಸಾಯನಿಕವಾಗಿರುವಂತಹ ನೈಟ್ರೇಟ್ ಇದೆ. ಇದು ಪ್ರತಿಕ್ರಿಯೆಗೆ ಒಳಗಾದ ಬಳಿಕ ನೈಟ್ರಿಕ್ ಆಕ್ಸೈಡ್ ಆಗಿ ಬದಲಾಗುವುದು ಮತ್ತು ರಕ್ತ ಸಂಚಾರವನ್ನು ಸುಗಮಗೊಳಿಸಲು ನೆರವಾಗುವುದು. ಮೆದುಳಿನ ಸಹಿತ ದೇಹದ ಪ್ರತಿಯೊಂದು ಅಂಗಾಂಗವು ಹೆಚ್ಚಿನ ರಕ್ತ ಸಂಚಾರವನ್ನು ಪಡೆದರೆ, ಆಗ ದೇಹವು ಹೆಚ್ಚು ಆಮ್ಲಜನಕ ಸರಬರಾಜು ಮಾಡಿದೆ ಎಂದು ಅರ್ಥ.

ರಕ್ತದೊತ್ತಡ ಕಡಿಮೆ : ಬೀಟ್ ರೂಟ್ ನಲ್ಲಿ ಇರುವಂತಹ ನೈಟ್ರೇಟ್ ಅಂಶದಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ. ನೈಟ್ರೇಟ್ ಅಂಶವು ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆ ಆಗುವ ಕಾರಣದಿಂದಾಗಿ ಇದು ರಕ್ತನಾಳಗಳನ್ನು ಹಿಗ್ಗುವಂತೆ ಮಾಡುವುದು ಮತ್ತು ಇದರಿಂದ ರಕ್ತದೊತ್ತಡವು ಕಡಿಮೆ ಆಗುವುದು.

ಬೀಟ್ ರೂಟ್ ನಲ್ಲಿ ವಿಟಮಿನ್ ಸಿ, ಮೆಗ್ನೇಶಿಯಂ ಹಾಗೂ ಕ್ಯಾಲ್ಶಿಯಂ ಹೇರಳವಾಗಿದ್ದು, ಪ್ರತಿನಿತ್ಯವೂ ಬೀಟ್ ರೂಟ್ ಜ್ಯೂಸ್ ಕುಡಿಯುವುದರಿಂದ ದೇಹದ ತ್ರಾಣವು ಹೆಚ್ಚಾಗುತ್ತದೆ. ಇದೇ ನೈಟ್ರೇಟ್ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಗೊಂಡ ಬಳಿಕ ವ್ಯಾಯಾಮ ಮತ್ತು ಇತರ ದೈಹಿಕ ಚಟುವಟಿಕೆ ವೇಳೆ ಆಮ್ಲಜನಕದ ಉಪಯೋಗವನ್ನು ತಗ್ಗಿಸುವ ಪರಿಣಾಮವಾಗಿ ದಣಿವು ಕಡಿಮೆ ಆಗುವುದು.

ದೈನಂದಿನ ಕಾರ್ಯಕ್ಕೆ ಶಕ್ತಿ : ಪ್ರತಿನಿತ್ಯವೂ ಬೀಟ್ ರೂಟ್ ಜ್ಯೂಸ್ ಕುಡಿದರೆ ಅದು ದೈನಂದಿನ ಕಾರ್ಯಕ್ಕೆ ಶಕ್ತಿ ನೀಡುವುದು ಮತ್ತು ದೀರ್ಘಕಾಲ ದೈಹಿಕ ಚಟುವಟಿಕೆಯನ್ನು ದಣಿವಿಲ್ಲದೆ ಮಾಡಬಹುದಾಗಿದೆ.

ಬೀಟ್ ರೂಟ್ ಜ್ಯೂಸ್ ನ್ನು ನಿತ್ಯವೂ ಕುಡಿದರೆ ಅದರಿಂದ ವಯಸ್ಸಾಗುವ ಲಕ್ಷಣಗಳನ್ನು ತಡೆಯಬಹುದಾಗಿದೆ. ಬೀಟ್ ರೂಟ್ ನಲ್ಲಿ ಇರುವಂತಹ ಫಾಲಟೆ ಅಂಶವು ಈ ಕಾರ್ಯಕ್ಕೆ ಕಾರಣವಾಗಿದೆ. ಇದು ಚರ್ಮದ ಸಮಸ್ಯೆ ಮತ್ತು ನೆರಿಗೆ ವಿರುದ್ಧ ಹೋರಾಡುವುದು ಮಾತ್ರವಲ್ಲದೆ ಚರ್ಮಕ್ಕೆ ಪುನಶ್ಚೇತನ ನೀಡುವುದು. ನಿಯಮಿತವಾಗಿ ಬೀಟ್ ರೂಟ್ ಜ್ಯೂಸ್ ಕುಡಿದರೆ ಅದರಿಂದ ಆರೋಗ್ಯಕಾರಿ ಮತ್ತು ಕಾಂತಿಯುತ ಚರ್ಮ ಪಡೆಯಬಹುದು.

ಮಧುಮೇಹ ನಿವಾರಣೆ : ಸಾಮಾನ್ಯವಾಗಿ ಮಧುಮೇಹದಿಂದ ಬಳಲುತ್ತಿರುವವರು ಬೀಟ್ ರೂಟ್ ಸೇವನೆ ಮಾಡಲು ಹಿಂದೇಟು ಹಾಕುತ್ತಾರೆ. ಹಾಗೆಂದು ಬೀಟ್ರೂಟನ್ನೇ ಸೇವನೆ ಮಾಡದೆ ಸಂಪೂರ್ಣವಾಗಿ ನಿಯಂತ್ರಿಸಬಾರದು. ಮಧುಮೇಹದಿಂದ ಬಳಲುತ್ತಿರುವವರೂ ಕೂಡ ಮಧ್ಯಮ ಪ್ರಮಾಣದಲ್ಲಿ ಸೇವನೆ ಮಾಡಬಹುದಾಗಿದೆ.

ಬೀಟ್ ರೂಟ್ ಜ್ಯೂಸ್ ಕೂದಲಿನ ಕಾಂತಿ ಮತ್ತು ಹೊಳಪವನ್ನು ಕಾಪಾಡಿಕೊಂಡು ಸಂಪೂರ್ಣ ಆರೋಗ್ಯ ಕಾಪಾಡುವುದು. ನೈಸರ್ಗಿಕವಾಗಿ ಸೌಂದರ್ಯ ಪಡೆಯಲು ನೀವು ಕೂದಲಿಗೆ ಕೂಡ ಬೀಟ್ ರೂಟ್ ಬಳಸಬಹುದು. ಬೀಟ್ ರೂಟ್ ಕೂದಲಿನ ಗುಣಮಟ್ಟವನ್ನು ತುಂಬಾ ಚೆನ್ನಾಗಿ ಕಾಪಾಡಿಕೊಳ್ಳುವುದು.

ಕಾಂತಿಯುತ ಕೂದಲು : ಒಣ ತಲೆಬುರುಡೆ, ಕೂದಲು ಉದುರುವಿಕೆ ಮತ್ತು ಕಾಂತಿಯುತ ಕೂದಲು ಪಡೆಯಲು ನೀವು ಬೀಟ್ ರೂಟ್ ಜ್ಯೂಸ್ ಬಳಸಿ. ಬೀಟ್ ರೂಟ್ ಜ್ಯೂಸ್ ಗೆ ಸ್ವಲ್ಪ ಶುಂಠಿ ಹಾಕಿ ಕುಡಿದರೆ ಆಗ ಕೂದಲು ಉದುರುವಿಕೆ ಸಮಸ್ಯೆ ನಿವಾರಣೆ ಮಾಡಬಹುದು. ಬೀಟ್ ರೂಟ್ ಜ್ಯೂಸ್ ಗೆ ವಿನೇಗರ್ ಹಾಕಿದರೆ ಆಗ ಒಣ ತಲೆಬುರುಡೆ ಸಮಸ್ಯೆ ನಿವಾರಣೆಯಾಗುತ್ತದೆ.

ಬೊಜ್ಜು ಮತ್ತು ಕ್ಯಾನ್ಸರ್ ನಿವಾರಣೆ : ದೀರ್ಘಕಾಲದ ಉರಿಯೂತ, ಪಿತ್ತಜನಕಾಂಗ ಸಂಬಂಧಿಸಿದ ಕಾಯಿಲೆಗಳು, ಬೊಜ್ಜು ಮತ್ತು ಕ್ಯಾನ್ಸರ್ ನಂತಹ ಸಮಸ್ಯೆಗಳಿಂದ ಬಳಲುತ್ತಿರುವವರಿಗೂ ಈ ಬೀಟ್ ರೂಟ್ ಸಾಕಷ್ಟು ಉಪಯೋಗಗಳನ್ನು ನೀಡಬಲ್ಲದು.

ರಕ್ತಹೀನತೆ, ರಕ್ತದ ಶುದ್ಧೀಕರಣ, ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಹಲ್ಲುಗಳ ಸಮಸ್ಯೆಗಳನ್ನೂ ದೂರಾಗಿಸುತ್ತದೆ. ಆದರೆ, ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವವರು ಮಾತ್ರ ಬೀಟ್ ರೂಟ್ ಸೇವನೆ ಮಾಡುವ ವೇಳೆ ಬಹಳ ಎಚ್ಚರದಿಂದ ಇರಬೇಕಾಗುತ್ತದೆ. ಏಕೆಂದರೆ ಇದರಲ್ಲಿ ಪೋಷಕಾಂಶಗಳು ಹೇರಳವಾಗಿರುವುದರಿಂದ ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಇಂತಹವರು ಮಿತವಾಗಿ ಆಹಾರ ಸೇವನೆ ಮಾಡುವುದು, ಗುಣಮಟ್ಟದ ಮೇಲೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

5-lips-4

Beauty Tips: ನೈಸರ್ಗಿಕವಾಗಿ ಗುಲಾಬಿ ಬಣ್ಣದ ತುಟಿ ನಿಮ್ಮದಾಗಲು ಈ ಟಿಪ್ಸ್‌ ಬಳಸಿ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

1

2025ಕ್ಕೆ ಬಾಲಿವುಡ್‌ಗೆ ಸೀಕ್ವೆಲ್‌ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.