ಉತ್ತರಪ್ರದೇಶದಲ್ಲಿ ಆಡಳಿತ ಪಕ್ಷ BJPಗೆ ಮತ್ತೆ ಮಣೆ: 1985ರ ಬಳಿಕ ಇದೇ ಮೊದಲ ಬಾರಿ ಮನ್ನಣೆ
ಯೋಗಿ ಆದಿತ್ಯನಾಥ್ ಗೋರಖ್ ಪುರ ನಂತಹ ಚಿಕ್ಕ ಪ್ರದೇಶದಲ್ಲಿರುವ ಮಠದ ಉಸ್ತುವಾರಿಯಾಗಿದ್ದರು.
Team Udayavani, Mar 10, 2022, 3:51 PM IST
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತ ಪಕ್ಷ ಭರ್ಜರಿ ಜಯದತ್ತ ದಾಪುಗಾಲಿಟ್ಟಿದ್ದು, ಇದರೊಂದಿಗೆ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಐದು ವರ್ಷದ ನಂತರ ಎರಡನೇ ಬಾರಿ ಅಧಿಕಾರಕ್ಕೇರುವ ಮೂಲಕ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ.
ಇದನ್ನೂ ಓದಿ:ಗೋವಾ ಬಿಜೆಪಿಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಪರ್ರಿಕರ್ ಪುತ್ರನಿಗೆ ಅಲ್ಪ ಅಂತರದ ಸೋಲು!
1985ರ ಬಳಿಕ ಇದೇ ಮೊದಲ ಬಾರಿಗೆ ಆಡಳಿತ ಪಕ್ಷ ಚುನಾವಣೆಯಲ್ಲಿ ಗೆದ್ದು ಸತತ ಎರಡನೇ ಬಾರಿಗೆ ಬಿಜೆಪಿ ಅಧಿಕಾರಕ್ಕೇರಿದಂತಾಗಿದೆ. ಉತ್ತರಪ್ರದೇಶದ 2022ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 260 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಐದು ವರ್ಷಗಳ ಪೂರ್ಣಾವಧಿಯ ಬಳಿಕ ಮತ್ತೆ ಬಿಜೆಪಿ ಸತತವಾಗಿ ಎರಡನೇ ಬಾರಿ ಅಧಿಕಾರಕ್ಕೇರಿದಂತಾಗಿದೆ.
ಯೋಗಿ ಆದಿತ್ಯನಾಥ್ ಗೋರಖ್ ಪುರ ನಂತಹ ಚಿಕ್ಕ ಪ್ರದೇಶದಲ್ಲಿರುವ ಮಠದ ಉಸ್ತುವಾರಿಯಾಗಿದ್ದರು. ಅಷ್ಟೇ ಅಲ್ಲ ಗೋರಖ್ ಪುರ್ ಲೋಕಸಭಾ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2017ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಬಿಜೆಪಿ ಹೈಕಮಾಂಡ್ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ಅಚ್ಚರಿ ಮೂಡಿಸಿತ್ತು.
49 ವರ್ಷದ ಯೋಗಿ ಆದಿತ್ಯನಾಥ್ ದೇಶಾದ್ಯಂತ ಹೆಚ್ಚು ಜನಪ್ರಿಯತೆಯಲ್ಲಿರುವ ಮುಖ್ಯಮಂತ್ರಿಯಾಗಿರುವುದಾಗಿ ವರದಿ ವಿವರಿಸಿದ್ದು, ಉತ್ತರಪ್ರದೇಶವನ್ನು ಹೊರತುಪಡಿಸಿಯೂ ಬೇರೆ, ಬೇರೆ ರಾಜ್ಯಗಳಲ್ಲಿಯೂ ಯೋಗಿ ಸ್ಟಾರ್ ಪ್ರಚಾರಕರಾಗಿದ್ದಾರೆ.
ಉತ್ತರಪ್ರದೇಶದಲ್ಲಿ ಈ ಹಿಂದೆ ನಾಲ್ವರು ಮುಖ್ಯಮಂತ್ರಿಗಳು ಮರಳಿ ಅಧಿಕಾರಕ್ಕೆ ಏರಿದ್ದರು. ಆದರೆ ಇದರಲ್ಲಿ ಯಾರೊಬ್ಬರೂ ಐದು ವರ್ಷಗಳ ಪೂರ್ಣಾವಧಿಗೊಳಿಸಿಲ್ಲ. ನಾರಾಯಣ ದತ್ತ ತಿವಾರಿ ಅವರು ಮೂರು ಬಾರಿ ಯುಪಿ ಮುಖ್ಯಮಂತ್ರಿಯಾಗಿದ್ದರು. ಎನ್ ಡಿ ತಿವಾರಿ 1976ರಿಂದ 77, 1984ರಿಂದ 85 ಹಾಗೂ 1988ರಿಂದ 1989ರಲ್ಲಿ ಮುಖ್ಯಮಂತ್ರಿಯಾಗಿದ್ದರು. ಆ ನಿಟ್ಟಿನಲ್ಲಿ ಯೋಗಿ ಆದಿತ್ಯನಾಥ್ 35 ವರ್ಷಗಳ ಬಳಿಕ ಐದು ವರ್ಷಗಳ ಪೂರ್ಣಾವಧಿ ನಂತರ ಸತತ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದಂತಾಗಿದೆ.
ಉತ್ತರಪ್ರದೇಶದ ಮುಖ್ಯಮಂತ್ರಿಗಳಲ್ಲಿ ಸಂಪೂರ್ಣಾನಂದ 1957ರಲ್ಲಿ, ಚಂದ್ರಭಾನು ಗುಪ್ತಾ 1962 ಹಾಗೂ ರೀಟಾ ಬಹುಗುಣ ಜೋಶಿ 1974ರಲ್ಲಿ ಕ್ರಮವಾಗಿ ಮುಖ್ಯಮಂತ್ರಿ ಪಟ್ಟ ಅಲಂಕರಿಸುತ್ತಿದ್ದರು. ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತಂದ ಮೊದಲ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್. ಉತ್ತರಪ್ರದೇಶದಲ್ಲಿ ಮೂವರು ಮುಖ್ಯಮಂತ್ರಿಗಳು ಮಾತ್ರ 5 ವರ್ಷಗಳ ಕಾಲ ಪೂರ್ಣಗೊಳಿಸಿದ್ದಾರೆ. ಅವರಲ್ಲಿ ಬಹುಜನ ಸಮಾಜ್ ಪಕ್ಷದ ಮಾಯಾವತಿ (2007-2012), ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ (2012-2017), ಯೋಗಿ ಆದಿತ್ಯನಾಥ್ (2017-2022).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.