‘ರಾಹುಲ್ ಎಂಕ್ಲೆಗ್ ಸೆಂಚುರಿ ಬೋಡು’: ಮಂಗಳೂರಿಗರ ವಿಶ್ವಕಪ್ ವಿಡಿಯೋ ವೈರಲ್
Team Udayavani, Jun 17, 2019, 1:24 PM IST
ಮ್ಯಾಂಚೆಸ್ಟರ್: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ನಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ ಉತ್ತಮ ಆಟದಿಂದ ಜನರ ಮನಗೆದ್ದಿದ್ದಾರೆ. ರವಿವಾರ ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ಕೂಡಾ ತಾಳ್ಮೆಯುತ ಅರ್ಧಶತಕ ಬಾರಿಸಿದ್ದರು. ಈ ಮಧ್ಯೆ ಇಂಡೋ ಪಾಕ್ ಕದನದ ವೇಳೆ ತುಳುನಾಡು ಮೂಲದ ಕೆಲವರು ಮಾಡಿರುವ ವಿಡಿಯೋ ಈಗ ಸಖತ್ ವೈರಲ್ ಆಗಿದೆ.
ಮೂಲತಃ ಮಂಗಳೂರು ಮೂಲದವರಾದ ಕೆ.ಎಲ್ ರಾಹುಲ್ ಫೀಲ್ಡಿಂಗ್ ವೇಳೆ ಮಂಗಳೂರು ಮೂಲದ ಕೆಲ ಪ್ರೇಕ್ಷಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ರವಿವಾರದ ಹೈವೋಲ್ಟೇಜ್ ಪಂದ್ಯದಲ್ಲಿ ರಾಹುಲ್ ಬೌಂಡರಿ ಲೈನ್ ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದರು. ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಕೆಲ ತುಳುನಾಡಿನ ಯುವಕರು ಜೋರು ಧ್ವನಿಯಲ್ಲಿ ಕೆ.ಎಲ್. ರಾಹುಲ್ ರನ್ನು ಕರೆಯುತ್ತಾ, ‘ರಾಹುಲ್ ಎಂಚ ಉಲ್ಲರ್. ಎಂಕ್ಲೆಗ್ ಸೆಂಚುರಿ ಬೋಡು. ಎಂಕುಲ್ ಕುಡ್ಲಡ್ದ್ ಬೈದಾ “ ( ನೀವು ಹೇಗಿದ್ದೀರಿ, ನಮಗೆ ಶತಕ ಬೇಕು. ನೀವು ಶತಕ ಬಾರಿಸಬೇಕು. ನಾವು ಮಂಗಳೂರಿನಿಂದ ಬಂದಿದ್ದೇವೆ ) ಎಂದು ತುಳು ಭಾಷೆಯಲ್ಲಿ ಹೇಳುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.