World Cup;ಭಾರತದ ಬೌಲಿಂಗ್ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾಕ್ಕೆ ಹೀನಾಯ ಸೋಲು

5 ವಿಕೆಟ್ ಕಬಳಿಸಿದ ರವೀಂದ್ರ ಜಡೇಜಾ..

Team Udayavani, Nov 5, 2023, 8:41 PM IST

1-sad-sadsad

ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದ ದಕ್ಷಿಣ ಆಫ್ರಿಕಾ ತಂಡವು ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ದಾಳಿಯ ಎದುರು ಮಂಕಾಗಿ ಹೀನಾಯ ಸೋಲು ಕಂಡಿತು. ಗೆಲುವಿನೊಂದಿಗೆ ಭಾರತ ಅಗ್ರ ಸ್ಥಾನಿಯಾಗಿ ಸೆಮಿ ಫೈನಲ್ ಪ್ರವೇಶಿಸಲಿದೆ.

327 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾದ ಘಟಾನುಘಟಿ ಬ್ಯಾಟ್ಸ್ ಮ್ಯಾನ್ ಗಳು ಇಂದು ಭಾರತದ ಬೌಲಿಂಗ್ ದಾಳಿಗೆ ಸಿಲುಗಿ ಪತರು ಗುಟ್ಟಿ ಹೋದರು. 27.1 ಓವರ್ ಗಳಲ್ಲಿ ಕೇವಲ 83 ರನ್ ಗಳಿಗೆ ಆಲೌಟಾಗುವ ಮೂಲಕ ಭಾರತ 243 ರನ್‌ಗಳ ಅತ್ಯಮೋಘ ಸ್ಮರಣೀಯ ಜಯ ಸಾಧಿಸಿತು.

ಭಾರತದ ಪರ ವೇಗಿ ಸಿರಾಜ್ ಅವರು ಅದ್ಬುತ ಫಾರ್ಮ್ ನಲ್ಲಿದ್ದ ಡಿ’ಕಾಕ್ ಅವರನ್ನು ಬೌಲ್ಡ್ ಮಾಡುವ ಮೂಲಕ ಮೊದಲ ಆಘಾತ ನೀಡಿದರು. ಆಬಳಿಕ ದಕ್ಷಿಣ ಆಫ್ರಿಕಾ ಆಟಗಾರರು ತಲೆ ಎತ್ತಲು ಸಾಧ್ಯವಾಗಲಿಲ್ಲ.

ಭಾರತದ ಪರ ಬಿಗಿ ದಾಳಿ ನಡೆಸಿದ ರವೀಂದ್ರ ಜಡೇಜಾ 5 ವಿಕೆಟ್ ಕಬಳಿಸಿದರು. ಶಮಿ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಕಿತ್ತರು.

ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿ ಭರ್ಜರಿ ಮೊತ್ತವನ್ನು ದಕ್ಷಿಣ ಆಫ್ರಿಕಾ ತಂಡದ ಎದುರಿಗಿಟ್ಟಿತು. ನಾಯಕ ರೋಹಿತ್ ಶರ್ಮ ಮತ್ತು ಶುಭಮನ್ ಗಿಲ್ 62 ರನ್ ಜತೆಯಾಟವಾಡಿ ವೇಗದ ಆರಂಭ ಒದಗಿಸಿಕೊಟ್ಟರು. ಶರ್ಮ 24 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು. ಗಿಲ್ 23 ರನ್ ಗಳಿಸಿದ್ದ ವೇಳೆ ನಿರ್ಗಮಿಸಿದರು.

ಆ ಬಳಿಕ ತಾಳ್ಮೆಯ ಆಟವಾಡಿದ ಕೊಹ್ಲಿ119 ಎಸೆತಗಳಲ್ಲಿ 100 ರನ್ ಗಳಿಸಿ ಸಂಭ್ರಮಿಸಿದರು. ಕೊಹ್ಲಿ ಅವರಿಗೆ ಉತ್ತಮ ಜತೆಯಾಟದ ಸಾಥ್ ನೀಡಿದ ಶ್ರೇಯಸ್ ಅಯ್ಯರ್ 87 ಎಸೆತಗಳಲ್ಲಿ 77 ರನ್ ಗಳಿಸಿ ಔಟಾದರು. ಕೆಎಲ್ ರಾಹುಲ್ 8 ರನ್, ಸೂರ್ಯಕುಮಾರ್ ಯಾದವ್ 22 ಗಳಿಸಿದ್ದ ವೇಳೆ ಔಟಾದರು. ವಿರಾಟ್ ಕೊಹ್ಲಿ ಅವರು ಜನ್ಮದಿನದ ಸಂಭ್ರಮದಲ್ಲಿ ಅಮೋಘ ಶತಕ ಸಿಡಿಸಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಸರಿಗಟ್ಟಿದರು.

ಕೊಹ್ಲಿ121 ಎಸೆತಗಳಲ್ಲಿ 101 ರನ್ ಗಳಿಸಿ ಅಜೇಯರಾಗಿ ಉಳಿದರು. ಕೊಹ್ಲಿ ಆಕರ್ಷಕ 10 ಬೌಂಡರಿಗಳನ್ನು ಬಾರಿಸಿದ್ದರು. ರವೀಂದ್ರ ಜಡೇಜಾ 15 ಎಸೆತಗಳಲ್ಲಿ 29 ರನ್ ಗಳಿಸಿ ಔಟಾಗದೆ ಉಳಿದರು.

ಸಚಿನ್ ತೆಂಡೂಲ್ಕರ್ 452 ಇನ್ನಿಂಗ್ಸ್ ಗಳಲ್ಲಿ 49 ಶತಕ ಬಾರಿಸಿದ್ದು,ವಿರಾಟ್ ಕೊಹ್ಲಿ ಅವರು 277 ಇನ್ನಿಂಗ್ಸ್ ಗಳಲ್ಲಿ 49 ನೇ ಶತಕ ದಾಖಲಿಸಿ ಹೊಸ ದಾಖಲೆಯತ್ತ ಮುನ್ನುಗ್ಗುತ್ತಿದ್ದಾರೆ.

8 ರಲ್ಲಿ 8 ಪಂದ್ಯಗಳನ್ನು ಗೆದ್ದಿರುವ ರೋಹಿತ್ ಶರ್ಮ ಬಳಗ ಸೆಮಿ ಫೈನಲ್ ಗೂ ಮುನ್ನ ನೆದರ್ ಲ್ಯಾಂಡ್ಸ್ ವಿರುದ್ಧ ಪಂದ್ಯವನ್ನು ಆಡಲಿದೆ. ದಕ್ಷಿಣ ಆಫ್ರಿಕಾ ತಂಡ ಅಫ್ಘಾನ್ ಎದುರು ಪಂದ್ಯ ಆಡಲಿದೆ.

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್

1-sadsdas

World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು

1-qweqwwqe

ICC ವಿಶ್ವಕಪ್‌ ಸಾಧಕರ ತಂಡಕ್ಕೆ ರೋಹಿತ್‌ ನಾಯಕ; ತಂಡ ಹೀಗಿದೆ

1-ww-eqeqwe

World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್‌ ಪ್ಯಾಟ್‌ ಕಮಿನ್ಸ್‌  ಫುಲ್‌ ಖುಷ್‌

1-saddasd

Head line ನಲ್ಲಿ ಮಿಂಚಿದ ಟ್ರ್ಯಾವಿಸ್‌ ಹೆಡ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.