World Cup; ಬಿಗಿ ದಾಳಿ ನಡೆಸಿ ಪಾಕಿಸ್ಥಾನವನ್ನು 191ಕ್ಕೆ ಕಟ್ಟಿ ಹಾಕಿದ ಭಾರತದ ಬೌಲರ್ ಗಳು
Team Udayavani, Oct 14, 2023, 5:30 PM IST
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆಯುತ್ತಿರುವ ಭಾರೀ ನಿರೀಕ್ಷೆಯ ಪಂದ್ಯದಲ್ಲಿ ಭಾರತದ ಬೌಲರ್ ಗಳು ಪಾಕಿಸ್ಥಾನವನ್ನು 191 ಕ್ಕೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ಬಿಗಿ ಬೌಲಿಂಗ್ ದಾಳಿ ಸಂಘಟಿಸಿತು. ಅತ್ಯುತ್ತಮ ನಿರ್ವಹಣೆ ತೋರಿದ ಎಲ್ಲ ಬೌಲರ್ ಗಳು ಬ್ಯಾಟಿಂಗ್ ಬಲವಿರುವ ಪಾಕಿಸ್ಥಾನವನ್ನು 42.5 ಓವರ್ ಗಳಲ್ಲಿ 191 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.
ಆರಂಭಿಕರಾದ ಅಬ್ದುಲ್ಲಾ ಶಫೀಕ್ 20 ,ಇಮಾಮ್-ಉಲ್-ಹಕ್ 36 ರನ್ ಗಳಿಸಿ ಔಟಾದರು. ಶಫೀಕ್ ಅವರನ್ನು ಸಿರಾಜ್ ಎಲ್ಬಿಡಬ್ಲ್ಯೂ ಮಾಡುವ ಮೂಲಕ ಮೊದಲ ವಿಕೆಟ್ ಕಬಳಿಸಿ ಆಘಾತ ನೀಡಿದರು.
ನಾಯಕ ಬಾಬರ್ ಆಜಮ್ ಗರಿಷ್ಠ 50 ರನ್ ಗಳಿಸಿ ಔಟಾದರೆ ಮೊಹಮ್ಮದ್ ರಿಜ್ವಾನ್ 49 ರನ್ ಗಳಿಸಿದ್ದ ವೇಳೆ ಔಟಾದರು. ,ಸೌದ್ ಶಕೀಲ್ 6, ಇಫ್ತಿಕರ್ ಅಹ್ಮದ್4 , ಶಾದಾಬ್ ಖಾನ್ 2, ಮೊಹಮ್ಮದ್ ನವಾಜ್4 , ಹಸನ್ ಅಲಿ 12 , ಹಾರಿಸ್ ರೌಫ್ 2 ರನ್ ಗಳಿಸಿ ಔಟಾದರು. ಶಾಹೀನ್ ಅಫ್ರಿದಿ (2) ಔಟಾಗದೆ ಉಳಿದರು.
ಪ್ರತಿಷ್ಠೆಯ ಪಂದ್ಯದಲ್ಲಿ ಅಮೋಘ ನಿರ್ವಹಣೆ ತೋರಿದ ಭಾರತದ ಬೌಲರ್ ಗಳು ನಿರೀಕ್ಷೆಗೂ ಮೀರಿದ ನಿರ್ವಹಣೆ ತೋರಿ ಗಮನಸೆಳೆದರು. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್ ಅವರು ತಲಾ 2 ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್
ODI: ಶ್ರೀಲಂಕಾ ಬ್ಯಾಟಿಂಗ್ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.