![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 2, 2023, 6:13 PM IST
ಮುಂಬೈ : ಇಲ್ಲಿನ ವಾಂಖೆಡೆ ಸ್ಟೇಡಿಯಂ ನಲ್ಲಿ ಗುರುವಾರ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ ಪಟ್ಟ ಭಾರತ ತಂಡ ಶುಭಮನ್ ಗಿಲ್, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಬೃಹತ್ ಮೊತ್ತ ಕಲೆ ಹಾಕಿದೆ. ಲಂಕಾಕ್ಕೆ ಗೆಲ್ಲಲು 358 ರನ್ ಗಳ ದೊಡ್ಡ ಮೊತ್ತ ಎದುರಿಟ್ಟಿದೆ.
ನಾಯಕ ರೋಹಿತ್ ಶರ್ಮ 4 ರನ್ ಗಳಿಸಿ ಔಟಾಗುವ ಮೂಲಕ ಆರಂಭಿಕ ಆಘಾತ ಅನುಭವಿಸಿತು. ಆ ಬಳಿಕ ಗಿಲ್ ಮತ್ತು ಕೊಹ್ಲಿ ಅಮೋಘ ಜತೆಯಾಟವಾಡಿದರು. ಅತ್ಯಮೋಘ ಆಟವಾಡಿದ ಗಿಲ್ ಶತಕದ ಹೊಸ್ತಿಲಲ್ಲಿ ಎಡವಿದರು. 92 ಎಸೆತಗಳಲ್ಲಿ 92 ರನ್ ಗಳಿಸಿದ್ದ ವೇಳೆ ದಿಲ್ಶನ್ ಮಧುಶನಕ ಎಸೆದ ಚೆಂಡನ್ನು ಕುಸಲ್ ಮೆಂಡಿಸ್ ಕೈಗಿತ್ತು ಭಾರೀ ನಿರಾಶರಾದರು. ಕೊಹ್ಲಿ 88 ರನ್ ಗಳಿಸಿದ್ದ ವೇಳೆ ಔಟ್ ಮಾಡುವಲ್ಲಿ ಮಧುಶನಕ ಯಶಸ್ವಿಯಾದರು.
ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಶ್ರೇಯಸ್ ಅಯ್ಯರ್ 56 ಎಸೆತಗಳಲ್ಲಿ 82 ರನ್ ಗಳಿಸಿ ಔಟಾದರು. 6 ಭರ್ಜರಿ ಸಿಕ್ಸರ್ ಮತ್ತು 3 ಬೌಂಡರಿ ಬಾರಿಸಿದ್ದರು. ಕೆಎಲ್ ರಾಹುಲ್21, ಸೂರ್ಯಕುಮಾರ್ ಯಾದವ್ 12 , ರವೀಂದ್ರ ಜಡೇಜಾ 35, ಮೊಹಮ್ಮದ್ ಶಮಿ 2 ರನ್ ಗಳಿಸಿ ಔಟಾದರು. 50 ಓವರ್ ಗಳಲ್ಲಿ8 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿತು.
ಲಂಕಾ ವೇಗಿ ಮಧುಶನಕ ದುಬಾರಿ ಎನಿಸಿದರೂ 10 ಓವರ್ ಗಳಲ್ಲಿ 80 ರನ್ ನೀಡಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್
World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು
ICC ವಿಶ್ವಕಪ್ ಸಾಧಕರ ತಂಡಕ್ಕೆ ರೋಹಿತ್ ನಾಯಕ; ತಂಡ ಹೀಗಿದೆ
World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಫುಲ್ ಖುಷ್
Head line ನಲ್ಲಿ ಮಿಂಚಿದ ಟ್ರ್ಯಾವಿಸ್ ಹೆಡ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.